ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಅವರು ಜನ ಸಂಪರ್ಕ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಇಂದು ಮತ್ತು ನಾಳೆ 2 ದಿನ ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಎಚ್ಚೆತ್ತುಕೊಂಡಿರುವ ಮೈತ್ರಿ ನಾಯಕರು ಜನರಿಗೆ ಇನ್ನಷ್ಟು ಹತ್ತಿರವಾಗಲು ನಿರ್ಧರಿಸಿದ್ದಾರೆ. ಹೀಗಾಗಿ ಸಿಎಂ ಗ್ರಾಮ ವಾಸ್ತವ್ಯ ನಡೆಸುತ್ತಿದ್ದರೆ, ಇತ್ತ ಡಿಸಿಎಂ ಜನಸಂಪರ್ಕ ಸಭೆ ಕೈಗೊಳ್ಳಲು ಮುಂದಾಗಿದ್ದಾರೆ.
ಪ್ರತಿ ತಿಂಗಳು 2 ದಿನ ಜನ ಸಂಪರ್ಕ ಸಭೆ ನಡೆಸಲು ಡಿಸಿಎಂ ನಿರ್ಧರಿಸಿದ್ದಾರೆ. ಆ ಮೂಲಕ ಜನರ ಸಮಸ್ಯೆ ಬಗೆಹರಿಸಲು ಯತ್ನಿಸಲಿದ್ದಾರೆ. ಜತೆಗೆ ಮೈತ್ರಿ ಸರ್ಕಾರ ಜನ ಸ್ನೇಹಿ ಎಂಬ ಅಭಿಪ್ರಾಯ ಮೂಡಿಸುವಂತೆ ಮಾಡಲು ಉಭಯ ನಾಯಕರು ಮುಂದಡಿ ಇಟ್ಟಿದ್ದಾರೆ ಎನ್ನಲಾಗಿದೆ.