ETV Bharat / briefs

ಗಮನಿಸಿ; ಮೇ 17 ರಿಂದ ಐದು ದಿನ ಕೊಪ್ಪಳ ಜಿಲ್ಲೆ ಕಂಪ್ಲೀಟ್​ ಲಾಕ್​ಡೌನ್​ - ಐದು ದಿನ ಕೊಪ್ಪಳ ಕಂಪ್ಲೀಟ್​ ಲಾಕ್​ಡೌನ್

ಮೇ 17 ರಿಂದ ಐದು ದಿನಗಳ ಕಾಲ ಯಾವುದೇ ಚಟುವಟಿಕೆಗಳು ಇರುವುದಿಲ್ಲ. ಕೃಷಿ ಚಟುವಟಿಕೆಗಳಿಗೆ ಬೇಕಾದ ಎಲ್ಲಾ ಅಂಗಡಿಗಳನ್ನು ಸಹ ಬಂದ್ ಮಾಡಲಾಗುತ್ತದೆ.

BC Patil
BC Patil
author img

By

Published : May 15, 2021, 5:19 PM IST

Updated : May 15, 2021, 9:27 PM IST

ಕೊಪ್ಪಳ: ಮೇ 17 ರಿಂದ ಐದು ದಿನಗಳ ಕಾಲ ಜಿಲ್ಲೆಯನ್ನು ಸಂಪೂರ್ಣ ಲಾಕ್​ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಬಿ.ಸಿ.‌ ಪಾಟೀಲ್, ಮೇ 17 ರಿಂದ ಐದು ದಿನಗಳ ಕಾಲ ಯಾವುದೇ ಚಟುವಟಿಕೆಗಳು ಇರುವುದಿಲ್ಲ. ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್ ಮಾಡಲಾಗುವುದು. ಕೃಷಿ ಚಟುವಟಿಕೆಗಳಿಗೆ ಬೇಕಾದ ಎಲ್ಲ ಅಂಗಡಿಗಳನ್ನು ಸಹ ಬಂದ್ ಮಾಡಲಾಗುತ್ತದೆ. ಇದಲ್ಲದೆ ಮೇ 31 ರವರೆಗೆ ಜಿಲ್ಲೆಯಲ್ಲಿ ಮದುವೆ, ಸಭೆ ಸಮಾರಂಭಗಳಿಗೆ ನಿರ್ಬಂಧ ಹಾಕಲಾಗಿದೆ ಎಂದರು.

ಹೋಂ ಐಸೋಲೇಷನ್​ನಲ್ಲಿದ್ದವರನನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗುವುದು. ಇನ್ನೆರಡು ದಿನಗಳಲ್ಲಿ ಅದಕ್ಕೆ ವ್ಯವಸ್ಥೆ ಮಾಡಲಾಗುವುದು. ತಮ್ಮ ಕುಟುಂಬದವರಿಗಾಗಿ ಸೋಂಕಿತರು ಸಹಕರಿಸಬೇಕು‌ ಎಂದು ಸಚಿವ ಬಿ.ಸಿ. ಪಾಟೀಲ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

Last Updated : May 15, 2021, 9:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.