ETV Bharat / briefs

ಸಿದ್ದರಾಮಯ್ಯ ಜೊತೆ ದೂರವಾಣಿ ಮೂಲಕ ಸಮಾಲೋಚಿಸಿದ ರಾಹುಲ್ ಗಾಂಧಿ

author img

By

Published : May 31, 2021, 6:09 PM IST

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ನಿಮ್ಮನ್ನ ಭೇಟಿ ಮಾಡಿ ಚರ್ಚಿಸುವುದಿದೆ. ಸಾಕಷ್ಟು ವಿಚಾರಗಳು ಕುರಿತು ಗಂಭೀರ ಚರ್ಚೆ ನಡೆಸಬೇಕೆಂದು ತಾವು ಕಾಲಾವಕಾಶ ನೀಡಿದ ತಕ್ಷಣ ದಿಲ್ಲಿಗೆ ಹೊರಡುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಆರೋಗ್ಯವನ್ನು ಸಹ ಸಿದ್ದರಾಮಯ್ಯ ವಿಚಾರಿಸಿದ್ದಾರೆ..

Rahul gandhi
Rahul gandhi

ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಇಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೂರವಾಣಿ ಮೂಲಕ ಸಮಾಲೋಚಿಸಿದರು.

ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಾಹುಲ್ ಗಾಂಧಿಗೆ ಎರಡು ದಿನಗಳ ಹಿಂದೆ ಸಿದ್ದರಾಮಯ್ಯ ಕರೆ ಮಾಡಿದ್ದರು. ಈ ಸಂದರ್ಭ ರಾಹುಲ್ ಗಾಂಧಿ ಕರೆ ಸ್ವೀಕರಿಸಿರಲಿಲ್ಲ.

ಎರಡು ದಿನದ ಬಳಿಕ ಇಂದು ರಾಹುಲ್ ಗಾಂಧಿ ಮರಳಿ ಕರೆ ಮಾಡಿ ಸಿದ್ದರಾಮಯ್ಯ ಜೊತೆ ಸಮಾಲೋಚಿಸಿದ್ದಾರೆ. ತಮ್ಮ ಆರೋಗ್ಯ ಸುಧಾರಿಸುತ್ತಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮರಳುವುದಾಗಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ, ಶೀಘ್ರದಲ್ಲೇ ದೆಹಲಿಗೆ ಬರುತ್ತೇನೆ. ನಿಮ್ಮನ್ನ ಭೇಟಿ ಮಾಡಿ ಮಾತುಕತೆ ನಡೆಸ್ತೇನೆ. ರಾಜ್ಯ, ಕೇಂದ್ರ ಸರ್ಕಾರದ ಹೋರಾಟದ ಚರ್ಚೆ ಮಾಡಬೇಕಿದೆ.

ರಾಜಕಾರಣದ ಬಗ್ಗೆಯೂ ಚರ್ಚಿಸಬೇಕಿದೆ. ಮತ್ತಷ್ಟು ಹೋರಾಟ ತೀವ್ರಗೊಳಿಸಬೇಕಿದೆ. ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಿದ್ದೇವೆ ಎಂದಿದ್ದಾರೆ.

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ನಿಮ್ಮನ್ನ ಭೇಟಿ ಮಾಡಿ ಚರ್ಚಿಸುವುದಿದೆ. ಸಾಕಷ್ಟು ವಿಚಾರಗಳು ಕುರಿತು ಗಂಭೀರ ಚರ್ಚೆ ನಡೆಸಬೇಕೆಂದು ತಾವು ಕಾಲಾವಕಾಶ ನೀಡಿದ ತಕ್ಷಣ ದಿಲ್ಲಿಗೆ ಹೊರಡುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಆರೋಗ್ಯವನ್ನು ಸಹ ಸಿದ್ದರಾಮಯ್ಯ ವಿಚಾರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.