ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ನೀರಸ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಗಾದಿ ತೊರೆಯುವ ಮನಸ್ಸು ಮಾಡಿರುವ ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ರಾಜೀವ್ ಗಾಂಧಿ ಕಾಲದಿಂದಲೂ ಗಾಂಧಿ ಕುಟುಂಬ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಾ ಬಂದಿದೆ. ತಾವು ಅಧ್ಯಕ್ಷ ಹುದ್ದೆಯನ್ನು ತೊರೆಯಬಾರದು ಎಂದು ರಕ್ತದಲ್ಲಿ ಪತ್ರ ಬರೆದು ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಶೈಲೇಂದ್ರ ತಿವಾರಿ ಮನವಿ ಮಾಡಿಕೊಂಡಿದ್ದಾರೆ.
ಸೋತರೂ ಕುಗ್ಗದ ವರ್ಚಸ್ಸು! ಎಐಸಿಸಿ ಅಧ್ಯಕ್ಷ ಗಾದಿಗೆ ಮುಂಚೂಣಿಯಲ್ಲಿದೆ ಖರ್ಗೆ ಹೆಸರು!
ರಾಹುಲ್ ರಾಜೀನಾಮೆಗೆ ಪಕ್ಷದ ವಲಯದಿಂದಲೇ ವಿರೋಧ ಕೇಳಿಬಂದಿದೆ. ಆದರೆ, ರಾಹುಲ್ ಮಾತ್ರ ಹುದ್ದೆ ತ್ಯಾಗದ ಯೋಚನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕರಿಗೆ ಹೇಳಿದ್ದಾರೆ.
ಇಂದು ಬೆಳಗಿನ ವೇಳೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಹ್ಮದ್ ಪಟೇಲ್ರನ್ನು ಪಕ್ಷದ ಕಚೇರಿಯಲ್ಲಿ ಭೇಟಿ ಮಾಡಿ ಅಧ್ಯಕ್ಷ ಸ್ಥಾನ ಕುರಿತಾಗಿ ಮಾತುಕತೆ ನಡೆಸಿದ್ದಾರೆ.