ETV Bharat / briefs

ಕೊರೊನಾ ನಿಯಂತ್ರಣ ಸಂಬಂಧ ಸರ್ಕಾರದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಹಿರಿಯ ನಾಯಕರ ಸಭೆ

ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಮತ್ತು ಮೆಡಿಕಲ್ ಕಿಟ್ ಖರೀದಿಯಲ್ಲಿ‌ ಗೋಲ್​​ಮಾಲ್ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ತನಿಖೆಗೆ ಒತ್ತಾಯಿಸುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.

Meeting
Meeting
author img

By

Published : Jul 20, 2020, 12:40 PM IST

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವ ಹೆಚ್.ಕೆ.ಪಾಟೀಲ್, ರಮೇಶ್ ಕುಮಾರ್, ಯು.ಟಿ.ಖಾದರ್, ಹೆಚ್.ಎಂ.ರೇವಣ್ಣ, ಕೆ.ಜೆ.ಜಾರ್ಜ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಮತ್ತು ಮೆಡಿಕಲ್ ಕಿಟ್ ಖರೀದಿಯಲ್ಲಿ‌ ಗೋಲ್​​ಮಾಲ್ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ತನಿಖೆಗೆ ಒತ್ತಾಯಿಸುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಕೋವಿಡ್ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯವಾಗಿದ್ದು, ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸದಿರುವುದರ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಲಾಗುತ್ತಿದೆ. ಸಭೆ ಬಳಿಕ ಕೈಗೊಂಡ ತೀರ್ಮಾನದ ಬಗ್ಗೆ ಅಂತಿಮವಾಗಿ ನಾಯಕರು ಮಾಹಿತಿ ನೀಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.