ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಸಚಿವರು, ಶಾಸಕರು, ಪದಾಧಿಕಾರಿಗಳ ಸಭೆ ನಡೆಸಲಾಯಿತು. ಕುಂದಗೋಳ ಗೆಲ್ಲಲು ರಣ ತಂತ್ರ ಹೆಣೆಯಲಾಯಿತು.
ಪ್ರತಿಯೊಂದು ಬೂತ್ಗಳ ಇನ್ ಚಾರ್ಜ್ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುತ್ತಿದ್ದಾರೆ. ಸಭೆಯಲ್ಲಿ ಆರ್.ವಿ ದೇಶಪಾಂಡೆ, ಶಿವಶಂಕರ ರೆಡ್ಡಿ, ಅಂಜಲಿ ನಿಂಬಾಳ್ಕರ್, ಸತೀಶ್ ಜಾರಕಿಹೊಳೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಶಾಸಕರು ಭಾಗವಹಿಸಿದ್ದರು.