ಬಾಗೇಪಲ್ಲಿ(ಚಿಕ್ಕಬಳ್ಳಾಪುರ): ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಬಂದ ರೈತರಿಗೆ ಪೊಲೀಸ್ ಪೇದೆಯೋರ್ವರು ಮಾಸ್ಕ್ ಗಳನ್ನು ವಿತರಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮುರಳಿ ಅವರು ಕೃಷಿ ಉತ್ಪನ್ನ ಮಾರುಕಟ್ಟೆಗೆ ಬಂದ ರೈತರಿಗೆ ಮಾಸ್ಕ್ ಗಳನ್ನು ವಿತರಿಸುವ ಮೂಲಕ ಕರ್ತವ್ಯ ಪಾಲನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮಾರುಕಟ್ಟೆಗೆ ಬರುವ ಪ್ರತಿಯೊಬ್ಬ ರೈತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಿ ಸ್ಯಾನಿಟೈಸರ್ ಬಳಸಬೇಕೆಂದು ಮನವಿ ಮಾಡಿದರು.
ಈ ಮೂಲಕ ಮಾಹಾಮಾರಿಯನ್ನು ನಿಯಂತ್ರಿಸುವಲ್ಲಿ ಕೊರೊನಾ ವಾರಿಯರ್ಸ್ ಗೆ ಸಹಾಯ ನೀಡಬೇಕೆಂದು ಕರೆ ನೀಡಿದರು.