ಪುತ್ತೂರು: ತರಕಾರಿ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣಾನಗರದ ಮಹಿಳೆಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ.
ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದ್ದ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಈ ಮಹಿಳೆಯ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದರು. ಇಂದು ಬಿಡುಗಡೆಯಾದ ವರದಿಯಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ.