ಶಿವಮೊಗ್ಗ : ಕರ್ಫ್ಯೂ ನಿಯಮ ಉಲ್ಲಂಘಿಸಿದ ವಾಹನ ಸವಾರರ ಮೇಲೆ ಹಾಗೂ ಲಾಕ್‌ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರ ವಿರುದ್ಧ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ 2020 ಅಡಿಯಲ್ಲಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 6, ವಿನೋಬ ನಗರ ಪೊಲೀಸ್ ಠಾಣೆಯಲ್ಲಿ 2, ಕೋಟೆ ಠಾಣೆಯಲ್ಲಿ 5, ಜಯನಗರ 5, ಶಿವಮೊಗ್ಗ ಗ್ರಾಮಾಂತರ 2, ತುಂಗಾನಗರ 1 ಮತ್ತು ಆಕ್ಸಿಜನ್ ಸಿಲಿಂಡರ್ಗಳನ್ನು ಕಾಳ ಸಂತೆಯಲ್ಲಿ ಮಾರುತ್ತಿದ್ದ ಸಿಲಿಂಡರ್ ಡೀಲರ್ ಕಂಪನಿಗಳ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಸೇರಿ ಒಟ್ಟು 23 ಪ್ರಕರಣಗಳನ್ನು ದಾಖಲಿಸಲಾಗಿದೆ.
ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 61 ವಾಹನಗಳನ್ನು (54 ದ್ವಿಚಕ್ರ ವಾಹನಗಳನ್ನು, ಮತ್ತು 7 ಕಾರುಗಳನ್ನು ) ವಶಪಡಿಸಿಕೊಳ್ಳಲಾಗಿದೆ. ಐಎಂವಿ ಕಾಯ್ದೆ ಅಡಿಯಲ್ಲಿ ಒಟ್ಟು 94 ಪ್ರಕರಣಗಳನ್ನು ದಾಖಲಿಸಿ, ರೂ. 44,200 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.