ಚಾಮರಾಜನಗರ: ಇಂದು ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಿದ್ದು, 534 ಮಂದಿಯಲ್ಲಿ ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. 683 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,373 ಆಗಿದ್ದು, 48 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3070 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 6408 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
8 ಮಂದಿ ಸಾವು:
ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದರೂ ಸಾವಿನ ಸರಣಿ ಮಾತ್ರ ಮುಂದುವರೆದಿದೆ. ಇಂದು ಕೂಡ 8 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 265ಕ್ಕೆ ಏರಿಕೆಯಾಗಿದೆ.