ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ 63 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 9 ಮಕ್ಕಳು, 22 ಮಹಿಳೆಯರು, 32 ಪುರುಷರಿದ್ದಾರೆ. ಮೂವರು ವಿದೇಶದಿಂದ ಮರಳಿದವರು, ಓರ್ವ ಗೋವಾದಿಂದ ಬಂದವರು. ನಾಲ್ವರಿಗೆ ದ್ವಿತೀಯ ಸಂಪರ್ಕದಿಂದ ಸೋಂಕು ತಗುಲಿದ್ದರೆ, ಇನ್ನೂ ಮೂವರ ಟ್ರಾವೆಲ್ ಹಿಸ್ಟರಿ ಸಿಕ್ಕಿಲ್ಲ. ಉಳಿದವರೆಲ್ಲರೂ ಮಹಾರಾಷ್ಟ್ರದಿಂದ ವಾಪಸಾದವರಾಗಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1007. ಇಂದು 15 ಜನ ಡಿಸ್ಚಾರ್ಜ್ ಆಗಿದ್ದು, ಒಟ್ಟು 474 ಜನ ಗುಣಮುಖರಾಗಿದ್ದಾರೆ.
ಕಲಬುರಗಿಯಲ್ಲಿ ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ! - ಕಲಬುರಗಿ ಕೊರೊನಾ ಪ್ರಕರಣಗಳು
ಕಲಬುರಗಿ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ದೇಶದ ಮೊದಲ ಕೋವಿಡ್ ಸಾವಿಗೆ ಸಾಕ್ಷಿಯಾಗಿದ್ದ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು ಕೂಡಾ ಒಂದೇ ದಿನ 63 ಜನರಿಗೆ ಸೋಂಕು ದೃಢಪಟ್ಟಿದೆ.