ETV Bharat / briefs

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಪಿಎಂ ಪ್ರತಿಭಟನೆ

ಬಡಜನರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಸಿಪಿಎಂ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದರು.

Protest
Protest
author img

By

Published : Aug 29, 2020, 4:51 PM IST

ಗುಡಿಬಂಡೆ: ಬಡಜನರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ತಾಲೂಕಿನ ಹಂಪಸಂದ್ರ ಗ್ರಾ.ಪಂ. ಮುಂಭಾಗ ಸಿಪಿಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜಯರಾಮರೆಡ್ಡಿ, ಕೋವಿಡ್-19 ಸಂದರ್ಭದಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉದ್ಯಮಿಗಳ, ಬಂಡವಾಳಶಾಹಿಗಳ ಪರ ಕೆಲಸ ಮಾಡುತ್ತಿವೆ. ಇಡೀ ವಿಶ್ವವೇ ಕೊರೊನಾ ವೈರಸ್‍ನಿಂದ ತಲ್ಲಣಗೊಂಡಿದ್ದು, ಕೊರೊನಾ ವಿರುದ್ಧ ಯುದ್ದ ಪ್ರಾರಂಭಿಸಿದ್ದರೆ ನಮ್ಮ ದೇಶದಲ್ಲಿ ಕೊರೊನಾ ಹೆಸರಲ್ಲಿ ಲೂಟಿ ಹೊಡೆಯುವ ದಂಧೆ ಮಾಡುತ್ತಿದೆ. ಇದೆಲ್ಲದರ ಭಾಗವಾಗಿ ಜನ ಸಾಮಾನ್ಯರ ಜೀವನ ನಿರ್ವಹಣೆ ಕಷ್ಟವಾಗಿದ್ದು, ಬೀದಿಗೆ ಬೀಳುತ್ತಿದ್ದಾರೆ. ಅಂತಹವರಿಗೆ ಕನಿಷ್ಠ ಪರಿಹಾರ ಸಹ ನೀಡದೇ ವಂಚನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ನಂತರ ಸಿಪಿಎಂ ತಾಲೂಕು ಕಾರ್ಯದರ್ಶಿ ಲಕ್ಷ್ಮೀನಾರಾಯಣ ಮಾತನಾಡಿ, ದೇಶದಲ್ಲಿ ಕೈಗಾರಿಕೆಗಳು ಮುಚ್ಚಿ ಹೋಗಿವೆ. ರೈತರ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ರೈತರು ಬೀದಿಪಾಲಾಗಿದ್ದಾರೆ. ನೆರೆ ಹಾವಳಿ ಹೆಚ್ಚಾಗಿ ಕೃಷಿ ಉತ್ಪನ್ನಗಳು ನಾಶವಾಗಿವೆ. ಇಂಥ ಸಮದಲ್ಲಿ ಜನರ ಜೊತೆಗೆ ಇದ್ದು ಧೈರ್ಯ ತುಂಬಿ ಸಹಾಯ ನೀಡಬೇಕಾದ ಸರ್ಕಾರ ಪೆಟ್ರೋಲ್, ಡೀಸೆಲ್ ದರಗಳನ್ನು ಏರಿಕೆ ಮಾಡಿ, ಗ್ಯಾಸ್ ಸಬ್ಸಿಡಿ ಸಂಪೂರ್ಣ ನಿಲ್ಲಿಸಿರುವುದು ಜನರ ಮೇಲೆಯೇ ಹೆಚ್ಚು ಹೊರೆ ಹಾಕುತ್ತಿದೆ. ಯೂರಿಯಾ ಕೊರತೆ ನೀಗಿಸಿ ರೈತರಿಗೆ ಸಮರ್ಪಕವಾಗಿ ಯೂರಿಯಾ ಸರಬರಾಜು ಮಾಡಬೇಕು. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಪ್ರತಿ ತಿಂಗಳು 7500ರೂ ನಂತೆ ಕನಿಷ್ಠ 10 ತಿಂಗಳು ಆರ್ಥಿಕ ಸಹಾಯ ಮಾಡಬೇಕು. ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡಬೇಕು. ನರೇಗಾ ಯೋಜನೆಯಡಿ 200 ಮಾನವ ದಿನಗಳಿಗೆ ಏರಿಕೆ ಮಾಡಿ 600 ರೂ. ಕೂಲಿ ಹಣ ನೀಡಬೇಕು. ಇದನ್ನು ಪಟ್ಟಣ ಪ್ರದೇಶಗಳಿಗೂ ಸಹ ವಿಸ್ತರಿಸಬೇಕೆಂದು ಅವರು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.