ಬೆಂಗಳೂರು: ಫೇಸ್ಬುಕ್ನಲ್ಲಿ ನಕಲಿ ಅಕೌಂಟ್ ಸೃಷ್ಟಿಸಿ ಅಶ್ಲೀಲ ಫೋಟೋ ಪೋಸ್ಟ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಯಶವಂತಪುರ ವಿಧಾನಸಭೆಯ ಬಿಜೆಪಿ ಮಹಿಳಾ ಘಟಕದ ಕಾರ್ಯದರ್ಶಿ ಎಸ್.ಲೀಲಾ ಎಂಬುವರು ನವಿ ಕನ್ನಡತಿ ಎಂಬ ಹೆಸರಿನಲ್ಲಿ ಫೇಸ್ಬುಕ್ ಅಕೌಂಟ್ ಸೃಷ್ಟಿಸಿದ್ದರು. ಕಿಡಿಗೇಡಿಗಳು ನವಿ ಕನ್ನಡತಿ ಫೇಸ್ಬುಕ್ ಅಕೌಂಟ್ನಲ್ಲಿದ್ದ ಭಾವಚಿತ್ರ ಬಳಿಸಿ ವಿದ್ಯಾ ಎಂ.ಕೆ ಎಂಬ ಹೆಸರಿನಲ್ಲಿ ಅಕೌಂಟ್ ಸೃಷ್ಟಿಸಿದ್ದಾರೆ.
ಅಲ್ಲದೆ ಅಕೌಂಟ್ನ ಗ್ಯಾಲರಿಯಲ್ಲಿ ಅಶ್ಲೀಲ ಫೋಟೋ ಬಳಸಿಕೊಂಡಿದ್ದು, ಇದರಿಂದ ನನ್ನ ಗೌರವಕ್ಕೆ ಧಕ್ಕೆ ಉಂಟಾಗಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಮಹಿಳೆ ತಿಳಿಸಿದ್ದಾರೆ.