ಕಾರವಾರ: ದಾಖಲೆಯ 4,79,649 ಮತಗಳ ಅಂತರದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯ ಅನಂತ್ ಕುಮಾರ್ ಹೆಗಡೆ ಜಯವನ್ನು ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿಯಾಗಿ ಸಂಭ್ರಮಿಸಿದರು.
ನಗರದ ಬಿಜೆಪಿ ಕಚೇರಿ ಎದುರು ಸೇರಿದ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಅನಂತ್ಕುಮಾರ್ ಹೆಗಡೆ ಗೆಲುವನ್ನು, ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದರು. ಬಳಿಕ ಅಂಬೇಡ್ಕರ್ ಸರ್ಕಲ್ವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಕೂಡ ಕಾರ್ಯಕರ್ತರೊಂದಿಗೆ ಬ್ಯಾಂಡ್ ವಾದ್ಯಕ್ಕೆ ಹೆಜ್ಜೆ ಹಾಕಿ ಗಮನ ಸೆಳೆದರು.
ಕಾರ್ಯಕರ್ತರೊಂದಿಗೆ ಕೆಲ ಹೊತ್ತು ಡ್ಯಾನ್ಸ್ ಮಾಡಿದ ರೂಪಾಲಿ, ಮೋದಿ ಹಾಗೂ ಅನಂತ್ ಕುಮಾರ್ ಹೆಗಡೆ ಪರ ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.