ದಾವಣಗೆರೆ: ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಹೊನ್ನಾಳಿ ತಾಲೂಕಿನ ಕುಂದೂರು ಕ್ಷೇತ್ರದ ಸದಸ್ಯೆ ದೀಪಾ ಜಗದೀಶ್ ಅವಿರೋಧವಾಗಿ ಆಯ್ಕೆಯಾದರು.
ಜಿಲ್ಲಾ ಪಂಚಾಯತ್‍ನ ಎಸ್.ಎಸ್.ಮಲ್ಲಿಕಾರ್ಜುನ್ ಸಭಾಂಗಣದಲ್ಲಿ ಗುರುವಾರ ಜಿಪಂ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ದೀಪಾ ಜಗದೀಶ್ ಒಬ್ಬರೇ 2 ನಾಮಪತ್ರ ಸಲ್ಲಿಸಿದ್ದರು. ಸೂಚಕರಾಗಿ ಜಿಪಂ ಸದಸ್ಯೆ ಶಾಂತಕುಮಾರಿ ಸಹಿ ಹಾಕಿದ್ದರು.
ಪ್ರಾದೇಶಿಕ ಆಯುಕ್ತ ವಿ.ಪಿ.ಇಕ್ಕೇರಿ ಅಧ್ಯಕ್ಷತೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 29 ಸದಸ್ಯರಲ್ಲಿ 22 ಮಂದಿ ಭಾಗವಹಿಸಿದ್ದರು. ಚುನಾವಣಾ ಕಾರ್ಯಸೂಚಿಯಂತೆ ಆಯುಕ್ತರು ನಾಮಪತ್ರ ಸಲ್ಲಿಸಿದ್ದ ಏಕೈಕ ಸದಸ್ಯೆ ಸಾಮಾನ್ಯ ಮಹಿಳೆ ವರ್ಗದ ಮೀಸಲಾತಿ ಪ್ರಕಾರ ದೀಪಾ ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷೆ ದೀಪಾ ಜಗದೀಶ್, ಗ್ರಾಮ ಪಂಚಾಯತ್ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಎಲ್ಲಾ ಅಧಿಕಾರಿಗಳೊಂದಿಗೆ ಹಾಗೂ ಜಿಲ್ಲಾಡಳಿತದೊಂದಿಗೆ ಸೇರಿ ಜನಪರ ಕೆಲಸ ಮಾಡುವೆ. ಮುಂಗಾರು ಸಂದರ್ಭ ಇದಾಗಿದ್ದು, ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಲೋಪ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು.
ದಾವಣಗೆರೆ ಜಿಪಂ ನೂತನ ಅಧ್ಯಕ್ಷರಾಗಿ ದೀಪಾ ಜಗದೀಶ್ ಅವಿರೋಧ ಆಯ್ಕೆ - Zilla panchayath election election
ಹೊನ್ನಾಳಿ ತಾಲೂಕಿನ ಕುಂದೂರು ಕ್ಷೇತ್ರದ ಸದಸ್ಯೆ ದೀಪಾ ಜಗದೀಶ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ದಾವಣಗೆರೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.