ETV Bharat / briefs

ಮುಂಗಾರು ಹಂಗಾಮು ಬಿತ್ತನೆ ಬೀಜ ಪೂರೈಕೆ ಕೊರತೆ ಇಲ್ಲ: ಜಿಲ್ಲಾಧಿಕಾರಿ ದೀಪಾ ಚೋಳನ್ - Dharwada latest news

ಧಾರವಾಡದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

Dharwad news
Dharwad news
author img

By

Published : Jun 4, 2020, 9:06 PM IST

ಧಾರವಾಡ: ಇಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಮತ್ತು ಹೆಚ್ಚುವರಿ ಮಳಿಗೆಗಳ ಮೂಲಕ ಬಿತ್ತನೆ ಬೀಜಗಳನ್ನು ಪೂರೈಸಲಾಗುತ್ತಿದೆ. ಸಾಕಷ್ಟು ಪ್ರಮಾಣದಲ್ಲಿ ಬೀಜ ದಾಸ್ತಾನು ಸಂಗ್ರಹವಿದೆ ಎಂದರು.

ರೈತರಿಗೆ ಯಾವುದೇ ಕೊರತೆಯಾಗುವುದಿಲ್ಲ. ರೈತರ ದಾಖಲೆಗಳನ್ನು ಗಣಕೀಕೃತ ಎಂಐಎಸ್ ವ್ಯವಸ್ಥೆಗೆ ದಾಖಲಿಸಲು ಸಮಯ ತೆಗೆದುಕೊಳ್ಳುತ್ತಿರುವುದರಿಂದ ವಿತರಣೆಯಲ್ಲಿ ಅಲ್ಲಲ್ಲಿ ವಿಳಂಬವಾಗುತ್ತಿದೆ. ಇದನ್ನು ಸರಿಪಡಿಸಲು ಹೆಚ್ಚುವರಿ ಡಾಟಾ ಎಂಟ್ರಿ ಆಪ್‍ರೇಟರ್​​ಗಳನ್ನು ನಿಯೋಜಿಸಲಾಗುತ್ತಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗದೇ ಬೀಜಗಳನ್ನು ಪಡೆದು ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ ಮುಂಗಾರು ಪೂರ್ವ ಮಳೆಯು ವಾಡಿಕೆಗಿಂತ ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಹೆಸರು ಕಾಳು ಮತ್ತು ಸೋಯಾಬೀನ್ ಬೀಜಗಳಿಗೆ ಸಾಕಷ್ಟು ಬೇಡಿಕೆ ಇದೆ. ಇದಕ್ಕೆ ಅನುಸಾರವಾಗಿ ಬೀಜ ಪೂರೈಸಬೇಕು. ವಿತರಣಾ ಕೇಂದ್ರಗಳಲ್ಲಿ ಅನಗತ್ಯವಾಗಿ ಜನಸಂದಣಿ ಉಂಟಾಗುವುದನ್ನು ತಡೆಯಲು ರೈತರಿಗೆ ಮುಂಚಿತವಾಗಿಯೇ ಟೋಕನ್ ನೀಡಿ ನಿಗದಿತ ದಿನಾಂಕಗಳಂದು ಆಗಮಿಸಿ ಬೀಜ ಪಡೆಯಲು ಸೂಚಿಸಬೇಕು. ನಿಗದಿಪಡಿಸಿದ ದಿನಗಳಂದು ಬೀಜ ದಾಸ್ತಾನು ಇರುವಂತೆ ಕ್ರಮ ವಹಿಸಬೇಕು. ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಬಾರದು. ಅಧಿಕ ಬೀಜದ ಬೇಡಿಕೆ ಇದ್ದರೆ ಕೂಡಲೇ ಸರ್ಕಾರಕ್ಕೆ ಕೋರಿಕೆ, ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಲಭ್ಯವಿರುವ ಜಿಲ್ಲೆಗಳಿಂದ ಖರೀದಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ ಬಿ.ಸಿ. ಸತೀಶ್ ಹಾಗೂ ಜಂಟಿ ಕೃಷಿ ನಿರ್ದೇಶಕ ರಾಜಶೇಖರ, ಬಿಜಾಪೂರ ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ತೋಟಗಾರಿಕೆ ಉಪನಿರ್ದೇಶಕ ಡಾ.ರಾಮಚಂದ್ರ ಮಡಿವಾಳರ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.