ಬೆಳಗಾವಿ: ಆಕ್ಸಿಜನ್ ಅಭಾವ ನೀಗಿಸಲು ಬಿಡಿಸಿಸಿ ಬ್ಯಾಂಕಿನಿಂದ ಜಿಲ್ಲೆಯಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಿಸಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಭಾಗ ಹಾಗೂ ಚಿಕ್ಕೋಡಿ ವಿಭಾಗದಲ್ಲಿ ತಲಾ ಒಂದು ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲಾಗುತ್ತಿದೆ. ಆಡಳಿತ ಮಂಡಳಿಯ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಮಹಾಮಾರಿ ಕೊರೊನಾ ವಿರುದ್ಧದ ಹೋರಾಟಕ್ಕೆ ಬಿಡಿಸಿಸಿ ಬ್ಯಾಂಕ್ ಜಿಲ್ಲಾಡಳಿತ ಜೊತೆಗೆ ಕೈಜೋಡಿಸಿದೆ. ಅಗತ್ಯ ಬಿದ್ದವರು ಈ ಘಟಕಗಳಲ್ಲಿ ಸರ್ಕಾರ ನಿಗದಿ ಮಾಡಿರುವ ದರದಲ್ಲಿ ಆಕ್ಸಿಜನ್ ತುಂಬಿಸಿಕೊಂಡು ಹೋಗಬಹುದು. ಜಿಲ್ಲೆಯಲ್ಲಿರುವ ಕೆಲವು ಏಜೆನ್ಸಿಗಳ ಜತೆಗೆ ಮಾತುಕತೆ ನಡೆಸಲಾಗಿದೆ.
ಸೆಪ್ಟಂಬರ್ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿಯ ಎರಡೂ ಘಟಕಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ಬಿಡಿಸಿಸಿ ಬ್ಯಾಂಕ್ ಸಾಮಾಜಿಕ ಜವಾಬ್ದಾರಿ ಹೊಂದಿದೆ. ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಶ್ರಮಿಸುತ್ತಿವೆ. ಹೀಗಾಗಿ ಈ ಮೊದಲು ಬ್ಯಾಂಕಿನಿಂದ ಪಿಎಂ ಹಾಗೂ ಸಿಎಂ ಪರಿಹಾರ ನಿಧಿಗೆ ನೆರವು ನೀಡಲಾಗಿದೆ ಎಂದರು.
ಬಿಡಿಸಿಸಿ ಬ್ಯಾಕಿನಿಂದ ಬೆಳಗಾವಿಯಲ್ಲಿ 2 ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ: ರಮೇಶ್ ಕತ್ತಿ - Belagavi Oxygen Production Unit Construction
ಬೆಳಗಾವಿ ವಿಭಾಗ ಹಾಗೂ ಚಿಕ್ಕೋಡಿ ವಿಭಾಗದಲ್ಲಿ ತಲಾ ಒಂದು ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲಾಗುತ್ತಿದೆ. ಆಡಳಿತ ಮಂಡಳಿಯ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ.