ETV Bharat / briefs

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕೇಸ್ ದಾಖಲಿಸಿ; ಡಿಸಿಎಂ ಕಾರಜೋಳ ಸೂಚನೆ - ಸಚಿವ ಗೋವಿಂದ ಕಾರಜೋಳ

ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ 24 ತಾಸು ಕೆಲಸ ಮಾಡಬೇಕು ವೈದ್ಯರು ಸ್ವತಃ ಕೋವಿಡ್ ವಾರ್ಡುಗಳಿಗೆ ಹೋಗಿ ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

DCM
DCM
author img

By

Published : May 6, 2021, 9:41 PM IST

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದಲ್ಲದೆ ಮಾರ್ಗಸೂಚಿ ಪಾಲಿಸಲು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್ ಲಭ್ಯತೆ ಬಗ್ಗೆ ನಿರಂತರ ನಿಗಾ ವಹಿಸಬೇಕು. ಖಾಸಗಿ ಅಥವಾ ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಬಾರದು. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ 24 ತಾಸು ಕೆಲಸ ಮಾಡಬೇಕು. ವೈದ್ಯರು ಸ್ವತಃ ಕೋವಿಡ್ ವಾರ್ಡುಗಳಿಗೆ ಹೋಗಿ ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಗೋಕಾಕ, ಸವದತ್ತಿ ಹಾಗೂ ಬೆಳಗಾವಿ ಸೇರಿದಂತೆ ಕೆಲ ತಾಲೂಕುಗಳಲ್ಲಿ ಸೋಂಕಿನ‌ ಪ್ರಮಾಣ ದಿಢೀರ್ ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಚಿವರು, ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ತಿಳಿಸಿದರು. ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಗೆ ಅಗತ್ಯವಿರುವ ಪ್ರಯೋಗಾಲಯದ ಸ್ಥಾಪನೆಗೆ ಅಗತ್ಯವಿರುವ ಪ್ರಸ್ತಾವವನ್ನು ಕಳಿಸಿದರೆ ಇದಕ್ಕೆ ಸರ್ಕಾರದ ಮಟ್ಟದಲ್ಲಿ ಮಂಜೂರಾತಿ ಒದಗಿಸಲಾಗುವುದು ಎಂದು ತಿಳಿಸಿದರು.

ಬಿಮ್ಸ್​ಗೆ ಇನ್ನೊಂದು ಆಕ್ಸಿಜನ್ ಘಟಕ

ಬಿಮ್ಸ್​ಗೆ ಇನ್ನೊಂದು ಆಕ್ಸಿಜನ್ ಸಂಗ್ರಹ ಘಟಕ ಸ್ಥಾಪಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ‌ ಕುರಿತು ಪ್ರಸ್ತಾವ ಸಲ್ಲಿಸಲು ತಿಳಿಸಿದರು.

ಓ.ಎನ್.ಜಿ.ಸಿ‌ ಆಕ್ಸಿಜನ್ ಘಟಕವನ್ನು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಲು ಮನವಿ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸ್ಥಳ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕೂಡಲೇ ಪತ್ರ ಬರೆಯುವಂತೆ ನಿರ್ದೇಶನ ನೀಡಿದರು.

ಸಕ್ಕರೆ ಕಾರ್ಖಾನೆಗಳಿಂದ ಸಿಲಿಂಡರ್ ಬಳಕೆಗೆ ಸಲಹೆ:

ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಕ್ಸಿಜನ್ ಸಿಲಿಂಡರ್​ಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕಲ್ಪಿಸಬೇಕು. ಪರಿಸ್ಥಿತಿ ಸುಧಾರಿಸಿದ ಬಳಿಕ ಆಯಾ ಕಾರ್ಖಾನೆಗಳಿಗೆ ಸಿಲಿಂಡರ್​ಗಳನ್ನು ಹಿಂದಿರುಗಿಸಬೇಕು.‌ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲರೂ ಸಹಕಾರ ನೀಡಲಿದ್ದು, ಇದನ್ನು‌ ಬಳಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಕರ್ತವ್ಯ ನಿರ್ಲಕ್ಷ್ಯ ಫಾರ್ಮಾಸಿಸ್ಟ್ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ:

ಇದೇ ವೇಳೆ ಮಾತನಾಡಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರು, ಬಿಮ್ಸ್​ನ‌ ಫಾರ್ಮಾಸಿಸ್ಟ್ ಅವರು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಫಾರ್ಮಾಸಿಸ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಜಿಲ್ಲಾ ಸರ್ಜನ್ ಅವರಿಗೆ ಸೂಚನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.