ತುಮಕೂರು : ಜಿಲ್ಲೆಯ ತಿಪಟೂರು ಪಟ್ಟಣದ ಅಮಾನಿಕೆರೆಯಲ್ಲಿ ಅಪರಿಚಿತ ವ್ಯಕ್ತಿವೋರ್ವನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 40 ವರ್ಷ ಎಂದು ಪೊಲೀಸರು ಅಂದಾಜಿಸಿದ್ದಾರೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಯು ವೈಯಕ್ತಿಕ ಬದುಕಿನಲ್ಲಿ ಬೇಸತ್ತು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.