ETV Bharat / briefs

ಬಳ್ಳಾರಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ! - ಹಾಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ

ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಘೋಷಿಸಿದ್ದಾರೆ.

decision-on-collective-resignation-of-bjp-officials
author img

By

Published : Oct 29, 2019, 7:22 PM IST

Updated : Oct 29, 2019, 7:35 PM IST

ಬಳ್ಳಾರಿ: ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್​ ರೆಡ್ಡಿ ಏಕಚಕ್ರಾಧಿಪತ್ಯ ಹಾಗೂ ಹಾಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ ಅವರ ನೇಮಕಾತಿಗೆ ಬೇಸತ್ತು ತಾಲೂಕು, ಜಿಲ್ಲಾ ಮತ್ತು ರಾಜ್ಯ ಘಟಕದ 40ಕ್ಕೂ ಹೆಚ್ಚು ಪದಾಧಿಕಾರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದರು.

ಸಾಮೂಹಿಕ ರಾಜೀನಾಮೆ ನೀಡಿದ ಪದಾಧಿಕಾರಿಗಳು

ಜಿಲ್ಲೆಯ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಸಂಡೂರು ಮತ್ತು ಸಿರುಗುಪ್ಪ ತಾಲೂಕು ಸೇರಿದಂತೆ ಬೂತ್ ಹಾಗೂ ಗ್ರಾಮಾಂತರ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿ ಕೆ.ಸುಗುಣ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.

ಮುಂದುವರಿಯಲಿದೆ ರಾಜೀನಾಮೆ ಪರ್ವ:

ಇದೇ ವೇಳೆ ಜಿಲ್ಲಾದ್ಯಂತ ರಾಜೀನಾಮೆ ಪರ್ವ ಇನ್ನೂ ಮುಂದುವರಿಯಲಿದೆ ಎಂದು ಚನ್ನಬಸವನಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

Intro:ಬಳ್ಳಾರಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆಗೆ ನಿರ್ಧಾರ!
ಬಳ್ಳಾರಿ: ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಲಾಗಿದೆಂದು
ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಘೋಷಿಸಿದ್ದಾರೆ.
ಬಳ್ಳಾರಿಯ ಖಾಸಗಿ ಹೊಟೇಲ್ ನಲ್ಲಿಂದು ನಡೆದ ಸುದ್ದಿ
ಗೋಷ್ಠಿ ಯಲ್ಲಿ ಅವರು ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕು ಹಾಗೂ ಜಿಲ್ಲಾ ಮತ್ತು ರಾಜ್ಯ ಘಟಕದ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿಯವ್ರ ಏಕಾಚಕ್ರಾಧಿಪತ್ಯ ಹಾಗೂ ಹಾಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ ಅವರ ನೇಮಕಾತಿಗೆ ಬೇಸತ್ತ ನಲವತ್ತಕ್ಕೂ ಹೆಚ್ಚು ಮಂದಿ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಪತ್ರವನ್ನು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವಗೌಡ ಪಾಟೀಲ ಅವರಿಗೆ ಸಲ್ಲಿಸಿದ್ದಾರೆ.

Body:ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ ಹಾಗೂ ಹೊಸಪೇಟೆ, ಕೂಡ್ಲಿಗಿ, ಸಂಡೂರು ಮತ್ತು ಸಿರುಗುಪ್ಪ ತಾಲೂಕು ಸೇರಿದಂತೆ ಬೂತ್ ಹಾಗೂ ಗ್ರಾಮಾಂತರ ಕ್ಷೇತ್ರದ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿ ಕೆ.ಸುಗುಣ
ಕೂಡ ರಾಜೀನಾಮೆ ಸಲ್ಲಿಸಿದ್ದಾರೆ.
ಮುಂದುವರಿಯಲಿದೆ ರಾಜೀನಾಮೆ ಪರ್ವ: ಜಿಲ್ಲಾದ್ಯಂತ ಇನ್ನೂ ಮುಂದುವರಿಯಲಿದೆ ರಾಜೀನಾಮೆ ಪರ್ವ ಶುರುವಾಗುತ್ತೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_2_BJP_DIST_COMMITTEE_REGIONED_VISUALS_7203310
Last Updated : Oct 29, 2019, 7:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.