ETV Bharat / briefs

ಕಾಮಿಡಿ - ಸಸ್ಪೆನ್ಸ್ ಥ್ರಿಲ್ಲರ್​ 'ಅಣಿ ಮುತ್ತುಗಳು' ಸಿನಿಮಾದಲ್ಲಿ ದೀಕ್ಷಿತ್​ ಶೆಟ್ಟಿ ಮೋಡಿ! - Dia movie actor Deekshith shetty

ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್​ ಶೈಲಿಯ ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದ್ದು, ಟಾಲಿವುಡ್​ನ ಮೊದಲ ಪ್ರಾಜೆಕ್ಟ್​ನಲ್ಲಿ ವಿಶೇಷವಾದ ಪಾತ್ರವನ್ನು ನಿರ್ವಹಿಸಿದ್ದಾರೆ ದೀಕ್ಷಿತ್ ಶೆಟ್ಟಿ.

ಆಣಿ ಮುತ್ತುಗಳು ಸಿನಿಮಾ
ಆಣಿ ಮುತ್ತುಗಳು ಸಿನಿಮಾ
author img

By

Published : May 24, 2021, 3:56 PM IST

ದಿಯಾ ಸಿನಿಮಾ ಮೂಲಕ ಚಂದನವನದಲ್ಲಿ ಮೋಡಿ ಮಾಡಿದ್ದ ಕಿರುತೆರೆ ನಟ ದೀಕ್ಷಿತ್ ಶೆಟ್ಟಿ, ಇದೀಗ ಮತ್ತೊಂದು ವಿಶೇಷ ಪ್ರಾಜೆಕ್ಟ್ ಮೂಲಕ ಆಗಮಿಸುತ್ತಿದ್ದಾರೆ. ಅದರ ಹೆಸರು ಅಣಿ ಮುತ್ತುಗಳು.

ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್​ ಶೈಲಿಯ ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದ್ದು, ಟಾಲಿವುಡ್​ನ ಮೊದಲ ಪ್ರಾಜೆಕ್ಟ್​ನಲ್ಲಿ ವಿಶೇಷವಾದ ಪಾತ್ರವನ್ನು ನಿರ್ವಹಿಸಿದ್ದಾರೆ ದೀಕ್ಷಿತ್. ಚಿತ್ರಮಂದಿರ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಅಚ್ಯುತ್ ರಾಮರಾವ್ ನಿರ್ಮಾಣ ಮಾಡಿರುವ ‘ಅಣಿ ಮುತ್ತುಗಳು’ ಚಿತ್ರವನ್ನು ಅಭಿಷೇಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರ ಸಾಗಲಿದ್ದು, ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್'ರಾವ್ ನಟಿಸಿದ್ದಾರೆ.

ಕಾಮಿಡಿ ಜತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥೆಯೂ ಈ ಚಿತ್ರದಲ್ಲಿದೆ. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಪ್ರೇಮ ಕಹಾನಿಯೂ ಸಿನಿಮಾದಲ್ಲಿದೆ. ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣ ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್​ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.

ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ - ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಝ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಚಿತ್ರತಂಡ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಇನ್ನೇನು ಲಾಕ್​ಡೌನ್​ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ತೆರೆಗೆ ಬರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.