ETV Bharat / briefs

ಗ್ರಾಮೀಣ ಭಾಗದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪನೆಗೆ ಬೆಳಗಾವಿ ಡಿಸಿ ನಿರ್ದೇಶನ

author img

By

Published : May 18, 2021, 9:26 PM IST

ಲಕ್ಷಣ ರಹಿತ ಸೋಂಕಿತರಿಗೆ ಆಯಾ ತಾಲೂಕುಗಳಲ್ಲಿ ಐಸೋಲೇಷನ್ ಹಾಗೂ ಚಿಕಿತ್ಸೆಗೆ ಅನುಕೂಲವಾಗುವಂತೆ ಜಿಲ್ಲಾದ್ಯಂತ ಕೋವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಆದ್ದರಿಂದ ಸೋಂಕಿತರನ್ನು ಕಡ್ಡಾಯವಾಗಿ ಈ ಕೇಂದ್ರಗಳಲ್ಲಿರಿಸುವುದರಿಂದ ಸೋಂಕು ಹರಡುವಿಕೆ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

belgavi
belgavi

ಬೆಳಗಾವಿ: ಕೋವಿಡ್ ಸೋಂಕಿತರ ಮನವೊಲಿಸಿ ತಾಲೂಕು ಮಟ್ಟದಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಕೇಂದ್ರಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಪ್ರತ್ಯೇಕವಾಗಿರಿಸುವ ಮೂಲಕ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಮಂಗಳವಾರ ಚಿಕ್ಕೋಡಿ ಮತ್ತು ರಾಯಬಾಗ ತಾಲೂಕುಗಳಲ್ಲಿ ನಡೆದ ವಿವಿಧ ತಾಲೂಕುಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ತಡೆಗಟ್ಟುವುದಕ್ಕೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಲಕ್ಷಣ ರಹಿತ ಸೋಂಕಿತರಿಗೆ ಆಯಾ ತಾಲೂಕುಗಳಲ್ಲಿ ಐಸೋಲೇಷನ್ ಹಾಗೂ ಚಿಕಿತ್ಸೆಗೆ ಅನುಕೂಲವಾಗುವಂತೆ ಜಿಲ್ಲಾದ್ಯಂತ ಕೋವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಆದ್ದರಿಂದ ಸೋಂಕಿತರನ್ನು ಕಡ್ಡಾಯವಾಗಿ ಈ ಕೇಂದ್ರಗಳಲ್ಲಿರಿಸುವುದರಿಂದ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ಹೇಳಿದರು.

ತುರ್ತು ಚಿಕಿತ್ಸೆ ಅಗತ್ಯವಿರುವವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು. ಇನ್ನುಳಿದವರನ್ನು ಕೋವಿಡ್ ಕೇರ್ ಕೇಂದ್ರಗಳಲ್ಲಿ ದಾಖಲಿಸುವ ಮೂಲಕ ಔಷಧೋಪಚಾರ ಸೇರಿದಂತೆ ಸೂಕ್ತ ಆರೈಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮ‌ ಮಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪನೆಗೆ ನಿರ್ದೇಶನ:
ಗ್ರಾಮ ಮಟ್ಟದಲ್ಲಿ ಕೂಡ ಸೋಂಕಿತರನ್ನು ಸುಲಭವಾಗಿ ಗುರುತಿಸಿ ಪ್ರತ್ಯೇಕವಾಗಿರಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಲು‌ ಕ್ರಮ‌ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ತಹಶೀಲ್ದಾರರಿಗೆ ಸೂಚನೆ ನೀಡಿದರು.

ವಾರ್ ರೂಮ್ ಕಾರ್ಯಚಟುವಟಿಕೆ‌ ಪರಿಶೀಲನೆ:
ಇದೇ ಸಂದರ್ಭದಲ್ಲಿ ರಾಯಬಾಗ ತಾಲೂಕಿನಲ್ಲಿ ಇರುವ ಕೋವಿಡ್ ವಾರ್ ರೂಂಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಇತರ ಹಿರಿಯ ಅಧಿಕಾರಿಗಳು ಅಲ್ಲಿನ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್ ಕೇರ್ ಕೇಂದ್ರಗಳಿಗೆ ಭೇಟಿ‌ ನೀಡಿ ಸೌಲಭ್ಯಗಳನ್ನು ಕೂಡ ಪರಿಶೀಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.