ಕಲಬುರಗಿ: ಚಿಂಚೋಳಿ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿಂಚೋಳಿ ಕ್ಷೇತ್ರದ ಖಾನಾಪುರದಲ್ಲಿ ನಡೆದಿದೆ.
ಚಿತ್ತಾಪುರ ತಾಲೂಕು ಪಂಚಾಯಿತಿ ಸದಸ್ಯ ನಾಮದೇವ ರಾಠೋಡ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು, ಅವರ ಬಳಿಯಿದ್ದ ನಗದನ್ನು ವಶಪಡಿಸಿಕೊಂಡಿದ್ದಾರೆ.
ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದ ವಾಹನವನ್ನು ಸೀಜ್ ಮಾಡುವಂತೆ ಮಾಜಿ ಶಾಸಕ ಉಮೇಶ್ ಜಾಧವ್ ಪಟ್ಟು ಹಿಡಿದು ಪೊಲೀಸ್ ಜೀಪ್ ಮುಂದೆ ಪ್ರತಿಭಟನೆ ನಡೆಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಚಿಂಚೋಳಿಯಲ್ಲಿ ಬೀಡುಬಿಟ್ಟಿದ್ದು,ತಮ್ಮ ಜೊತೆಗೆ ಗೂಂಡಾಗಳನ್ನು ಇರಿಸಿಕೊಂಡಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಜಾಧವ್ ಅವರ ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂಪಡೆದರು.