ETV Bharat / briefs

ಆಸ್ಪತ್ರೆಗಳಿಗೆ ಸಿಗದ ರೆಮ್ಡೆಸಿವಿರ್ ಬಿಜೆಪಿ ಸಂಸದರಿಗೆ ಸಿಕ್ಕಿದ್ದು ಹೇಗೆ?: ಡಿ.ಕೆ ಶಿವಕುಮಾರ್ ಪ್ರಶ್ನೆ - ಕೊರೊನಾ ಚಿಕಿತ್ಸೆಗೆ ಅಗತ್ಯವಾದ ರೆಮಿಡಿಸಿವಿರ್ ಚುಚ್ಚುಮದ್ದು

ಈ ಔಷಧ ಪೂರೈಸಿ ಎಂದು ನಾವು ಕೇಳಿದಾಗ, ಆಸ್ಪತ್ರೆಗಳು ಕೇಳಿದಾಗ ಕೇವಲ ಡ್ರಗ್ ಪರವಾನಗಿ ಇರುವವರಿಗೆ ಮಾತ್ರ ಇದನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ಈಗ ಸಂಸದರು ಪೆಟ್ಟಿಗೆಗಟ್ಟಲೆ ಔಷಧ ಹೇಗೆ ತಂದಿದ್ದಾರೆ.

DK Shivakumar
DK Shivakumar
author img

By

Published : May 1, 2021, 5:31 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ಅಗತ್ಯವಾದ ರೆಮ್ಡೆಸಿವಿರ್​​​​ ಚುಚ್ಚುಮದ್ದಿಗೆ ಅಭಾವ ಹೆಚ್ಚಾಗಿದೆ. ಆಸ್ಪತ್ರೆಗಳು ಇಂಜಕ್ಷನ್ ಪೂರೈಸಿ ಎಂದು ಗೋಗರೆದರೂ ಸರಬರಾಜು ಆಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ನಾಯಕರು, ಸಂಸದರಿಗೆ ಬಾಕ್ಸ್ ಗಟ್ಟಲೇ ಔಷಧ ಕೊಟ್ಟು ಕಳುಹಿಸಲಾಗುತ್ತಿದೆ. ಇದು ಹೇಗೆ ಸಾಧ್ಯ? ಇದು ಸರಿಯೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಸಾಮಾಜಿಕ ಜಾಲತಾಣ ಯೋಧರ ನೇಮಕ ಅಭಿಯಾನ ಹಾಗೂ ಕೊರೊನಾ ಸೋಂಕಿತರ ನೆರವಿಗೆ ಆ್ಯಂಬುಲೆನ್ಸ್ ಸೌಲಭ್ಯಕ್ಕೆ ಚಾಲನೆ ಕೊಟ್ಟ ನಂತರ ಮಾತನಾಡಿದ ಅವರು, ನನಗೆ ಛತ್ತೀಸಘಡ, ರಾಜಸ್ಥಾನ ಮುಖ್ಯಮಂತ್ರಿಗಳು ಕರೆ ಮಾಡಿ, ನಾವು ನಿಮ್ಮ ರಾಜ್ಯದ ಡಿಎಚ್ಒಗಳಿಗೆ ಔಷಧಿಗಳನ್ನು ಪೂರೈಸಲು ಅನುಮತಿ ನೀಡಿದ್ದರೂ, ರಾಜ್ಯ ಸರ್ಕಾರ ಅದನ್ನು ತಡೆ ಹಿಡಿದಿದೆ ಎಂದು ಹೇಳುತ್ತಿದ್ದಾರೆ. ನಾನು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳಿಗೆ ಕರೆ ಮಾಡಿ ಈ ವಿಚಾರದ ಬಗ್ಗೆ ಕೇಳಿದೆ. ಅವರು ಏನನ್ನೂ ಹೇಳದೇ ಈ ಸಮಸ್ಯೆ ಬಗೆಹರಿಸುತ್ತೇವೆ ಎಂದರು. ಆದರೆ, ಮತ್ತೊಂದು ಕಡೆ ಬಿಜೆಪಿ ನಾಯಕರುಗಳಿಗೆ ಈ ಔಷಧವನ್ನು ಡಬ್ಬಗಳಲ್ಲಿ ತುಂಬಿ, ತುಂಬಿ ಕಳುಹಿಸುತ್ತಿದ್ದಾರೆ ಎಂದರು.

ಬಿಜೆಪಿ ನಾಯಕರು, ಸಂಸದರು ಆಸ್ಪತ್ರೆಗಳ ಮಾಲೀಕರಾ? ಡ್ರಗ್ ಕಂಟ್ರೋಲರ್​ಗಳಾ? ಔಷಧ ಪಡೆಯಲು ಪರವಾನಗಿ ಪಡೆದಿದ್ದಾರಾ? ಆ ನಾಯಕರು ಔಷಧ ತೆಗೆದುಕೊಂಡು ಜನರಿಗೆ ನೀಡುತ್ತಿರಬಹುದು, ಅದರ ಬಗ್ಗೆ ನಾನು ತಕರಾರು ಮಾಡುವುದಿಲ್ಲ. ಆದರೆ, ಯಾವ ಕಾನೂನಿನ ಅಡಿಯಲ್ಲಿ ಅವರು ದೊಡ್ಡ ಪ್ರಮಾಣದಲ್ಲಿ ಔಷಧವನ್ನು ಕೊಂಡೊಯ್ಯಲು ಅನುಮತಿ ನೀಡಲಾಯಿತು? ಯಡಿಯೂರಪ್ಪನವರೇ ನಿಮ್ಮ ಆಡಳಿತದಲ್ಲಿ ಏನೇನಾಗುತ್ತಿದೆ? ಪ್ರಧಾನಮಂತ್ರಿಗಳು, ಕೇಂದ್ರ ಆರೋಗ್ಯ ಸಚಿವರು ಈ ಬಗ್ಗೆ ಗಮನ ಹರಿಸಬೇಕಿದೆ. ಬಿಜೆಪಿ ನಾಯಕರು, ಸಂಸದರು ಈ ಔಷಧವನ್ನು ತೆಗೆದುಕೊಂಡು ಹೋಗಲು ಅನುಮತಿ ಕೊಟ್ಟಿದ್ದು ಯಾರು? ಇದು ದೇಶದ ಅತಿದೊಡ್ಡ ಅಪರಾಧ. ಯಾವುದೇ ಸಚಿವ, ಶಾಸಕ ತಮ್ಮ ಕಚೇರಿ ಪ್ರಭಾವ ಬಳಿಸಿ ಔಷಧ ಪಡೆಯುವಂತಿಲ್ಲ ಎಂದು ದೂರಿದರು.

ಇದನ್ನೂ ಓದಿ: ಮೂಗಿಗೆ ನಿಂಬೆ ರಸ ಹೇಳಿಕೆ: ವಿಜಯ್ ಸಂಕೇಶ್ವರ್ ವಿರುದ್ಧ ಅಥಣಿಯಲ್ಲಿ ದೂರು

ಈ ಔಷಧ ಪೂರೈಸಿ ಎಂದು ನಾವು ಕೇಳಿದಾಗ, ಆಸ್ಪತ್ರೆಗಳು ಕೇಳಿದಾಗ ಕೇವಲ ಡ್ರಗ್ ಪರವಾನಗಿ ಇರುವವರಿಗೆ ಮಾತ್ರ ಇದನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ಈಗ ಸಂಸದರು ಪೆಟ್ಟಿಗೆಗಟ್ಟಲೆ ಔಷಧ ಹೇಗೆ ತಂದಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರು, ಪ್ರಧಾನಿಗಳು ಉತ್ತರಿಸಬೇಕು? ಇದಕ್ಕೆ ಒಂದು ಪ್ರಕ್ರಿಯೆ ಇದೆ. ಇದು ನಿಮ್ಮ ಮನೆ ಆಸ್ತಿಯಲ್ಲ. ಬಡವರಿಗೆ ಔಷಧ ಸಿಗಲ್ಲ, ರಾಜಕಾರಣಿಗಳ ಆಪ್ತರಿಗೆ ಮಾತ್ರ ಸಿಗುತ್ತದೆ ಎಂದರೆ ಏನರ್ಥ? ಎಂದರು.

ಸಮಾಜ, ನೊಂದ ಜನರ ಧ್ವನಿಯಾಗಿ ಕೆಲಸ ಮಾಡಲು ಈ ಅವಕಾಶ ನೀಡಲಾಗಿದೆ. ಇದಕ್ಕಾಗಿ 1800 1200 00044 ಈ ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿ. 7574000525 ಗೆ ವಾಟ್ಸಪ್ ಮಾಡಬಹುದು. ಪ್ರಜಾಪ್ರಭುತ್ವ ರಕ್ಷಣೆಗೆ ವಾರಿಯರ್ ಆಗಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ದೇಶ ಸೇವೆಗೆ ಇದೊಂದು ದೊಡ್ಡ ಅವಕಾಶ ಎಂದರು.

ಇದನ್ನೂ ಓದಿ: ಕೋವಿಡ್ ಸೋಂಕಿತರ ವೈದ್ಯಕೀಯ ವೆಚ್ಚ ಸರ್ಕಾರ ಭರಿಸಲಿ: ಈಶ್ವರ್ ಖಂಡ್ರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.