ETV Bharat / briefs

ಬರ ನಿರ್ವಹಣೆಗೆ 730 ಕೋಟಿ ಬಿಡುಗಡೆ: ಸಚಿವ ದೇಶಪಾಂಡೆ - ಉದ್ಯೋಗ ಖಾತ್ರಿ

ಬರ ಪರಿಶೀಲನೆಗೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್​.ವಿ.ದೇಶಪಾಂಡೆ. ಉದ್ಯೋಗ ಅರಸಿ ಗುಳೆ ಹೋಗದಂತೆ ರೈತರು, ಕಾರ್ಮಿಕರಲ್ಲಿ ಮನವಿ ಮಾಡಿದ ಸಚಿವ.

ಬರ ಪರಿಹಾರ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಆರ್​.ವಿ.ದೇಶಪಾಂಡೆ
author img

By

Published : May 29, 2019, 12:12 AM IST

ಹುಬ್ಬಳ್ಳಿ: ಕುಡಿಯುವ ನೀರು, ಮೇವು ಪೂರೈಸಲು ಸುಮಾರು 730 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ 13 ಕೋಟಿ ಮಾನವ ದಿನಗಳ ಗುರಿಯನ್ನು ರಾಜ್ಯಕ್ಕೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್​.ವಿ.ದೇಶಪಾಂಡೆ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮಕ್ಕೆ ಬರ ಪರಿಶೀಲನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಮುಂಗಾರು ದುರ್ಬಲವಾಗಿದೆ. ಬರ ಪರಿಸ್ಥಿತಿ ಮುಂದುವರೆಯುವ ಆತಂಕವಿದೆ.

ಬರ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್​.ವಿ.ದೇಶಪಾಂಡೆ

ಕುಡಿಯುವ ನೀರು ಪೂರೈಸಲು ಟ್ಯಾಂಕರ್​ಗಳನ್ನು ಬಳಸುವ ಅಧಿಕಾರ ತಹಶೀಲ್ದಾರರಿಗೆ ನೀಡಲಾಗಿದೆ. ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿ ಇದ್ದಿದ್ದರಿಂದ ಬರಪೀಡಿತ ಸ್ಥಳಗಳಿಗೆ ಅಧಿಕೃತವಾಗಿ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ ಎಂದರು.

ಬೆಂಗಳೂರು ಮತ್ತು ಹುಬ್ಬಳ್ಳಿಯಿಂದ ಮೋಡ ಬಿತ್ತನೆ ಕಾರ್ಯ ನಡೆಸಲು ಸರ್ಕಾರ ನಿರ್ಧರಿಸಿದೆ. ಮುಖ್ಯವಾಗಿ ಯಾರೂ ಗುಳೆ ಹೋಗಬಾರದು ಎಂಬ ಉದ್ದೇಶದಿಂದ ನರೇಗಾ ಅಡಿ ಉದ್ಯೋಗ ಸೃಜನೆ ಕಾಮಗಾರಿಗಳನ್ನು ಅಧಿಕ ಪ್ರಮಾಣದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಪ್ರತಿ ಜಿಲ್ಲೆಗೂ ಗುರಿ ನಿಗದಿಪಡಿಸಿ ಉದ್ಯೋಗ ಖಾತ್ರಿ ಕೆಲಸಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ ಒಂದು ಕಾಮಗಾರಿಯನ್ನಾದರೂ ಕೈಗೊಳ್ಳಲು ಸೂಚಿಸಲಾಗಿದೆ ಎಂದರು‌.

ಜುಲೈ ಅಂತ್ಯದವರೆಗೂ ಮೇವನ್ನು ರಾಜ್ಯದಿಂದ ಹೊರಗೆ ಕಳಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಬೇಕು. ಅರಣ್ಯ ಬೆಳೆಸಿ ನಿಸರ್ಗ ಕಾಪಾಡಬೇಕು ಎಂದು ಹೇಳಿದರು.

Intro:ಹುಬ್ಬಳಿBody:ಸ್ಲಗ್: ಬರ ವೀಕ್ಷಣೆ ಮಾಡಿದ ಸಚಿವ :ದೇಶಪಾಂಡೆ..

ಹುಬ್ಬಳ್ಳಿ: ಈ ಬಾರಿಯೂ ಮುಂಗಾರು ದುರ್ಬಲವಾಗಿ ಬರಪರಿಸ್ಥಿತಿ ಮುಂದುವರೆಯುವ ಆತಂಕವಿದೆ.
ಕುಡಿಯುವ ನೀರು ಪೂರೈಸಲು ಟ್ಯಾಂಕರ್ ಗಳನ್ನು ಬಳಸುವ ಅಧಿಕಾರ ಜಿಲ್ಲಾಧಿಕಾರಿಗಳ ಬಳಿ ಮಾತ್ರ ಇತ್ತು ಅದನ್ನು ವಿಕೇಂದ್ರೀಕರಣ ಮಾಡಿ, ತಹಸೀಲ್ದಾರಗಳಿಗೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮಕ್ಕೆ ಭೇಟಿ ನೀಡಿ ಬರ ಪರಿಶೀಲನೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇದುವರೆಗೆ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದುದರಿಂದ ಬರಪೀಡಿತ ಸ್ಥಳಗಳಿಗೆ ಅಧಿಕೃತವಾಗಿ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ ಎಂದರು.ಬೆಂಗಳೂರು ಮತ್ತು ಹುಬ್ಬಳ್ಳಿಯಿಂದ ಮೋಡ ಬಿತ್ತನೆ ಕಾರ್ಯ ನಡೆಸಲು ಸರ್ಕಾರ ನಿರ್ಧರಿಸಿದೆ.ಮುಖ್ಯವಾಗಿ ಯಾರೊಬ್ಬರೂ ಗುಳೆ ಹೋಗಬಾರದು ಎಂಬ ಉದ್ದೇಶದಿಂದ ನರೇಗಾ ಅಡಿ ಉದ್ಯೋಗ ಸೃಜನೆ ಕಾಮಗಾರಿಗಳನ್ನು ಅಧಿಕ ಪ್ರಮಾಣದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ಕಳೆದ ವರ್ಷದಲ್ಲಿ 10.47 ಕೋಟಿ ಮಾನವ ದಿನಗಳ ಸೃಜಿಸುವುದರ ಮೂಲಕ ರಾಷ್ಟ್ರದಲ್ಲೇ ಅತಿ ಹೆಚ್ಚು ಉದ್ಯೋಗವನ್ನು ರಾಜ್ಯದಲ್ಲಿ ನೀಡಲಾಗಿದೆ.‌ ಈ ವರ್ಷ 13 ಕೋಟಿ ಮಾನವ ದಿನಗಳ ಗುರಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ ಎಂದು ಅವರು ಹೇಳಿದರು.
ಪ್ರತಿ ಜಿಲ್ಲೆಗಳಿಗು ಗುರಿ ನಿಗದಿಪಡಿಸಿ ಉದ್ಯೋಗ ಖಾತ್ರಿ ಕೆಲಸಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಟ ಒಂದು ಕಾಮಗಾರಿಯನ್ನಾದರೂ ಕೈಗೊಳ್ಳಲು ಸೂಚಿಸಲಾಗಿದೆ ಎಂದರು‌. ಜನ ಜಾನುವಾರುಗಳಿಗೆ ಕುಡಿಯುವ ನೀರು,ಮೇವು ಪೂರೈಸಲು ಎಲ್ಲಾ 30 ಜಿಲ್ಲೆಗಳಿಗೆ 727 ರಿಂದ 730 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದರು‌. ಜುಲೈ ಅಂತ್ಯದವರೆಗೂ ಮೇವು ರಾಜ್ಯದಿಂದ ಹೊರಗೆ ಕಳಿಸಲು ನಿರ್ಬಂಧ ಹೇರಲಾಗಿದೆ. 2005,2007, 2010, 2017 ಹೊರತು ಪಡಿಸಿ ಕಳೆದ 14 ವರ್ಷಗಳ ಕಾಲ ಬರ ಅನುಭವಿಸಿದ್ದೇವೆ ಎಂದು ಅವರು ಹೇಳಿದರು.
ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಬೇಕು. ಅರಣ್ಯ ಬೆಳೆಸಿ ನಿಸರ್ಗ ಕಾಪಾಡಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಗ್ರಾಮದ ಹೊರವಲಯದಲ್ಲಿ ನಿರ್ಮಿಸಿದ ಮೇವು ಬ್ಯಾಂಕ್ ವೀಕ್ಷಣೆ ಮಾಡಿದರು. ಮೇವು ಬ್ಯಾಂಕ್ ವೀಕ್ಷಣೆ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಚಿವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ ಹಾಗೂ ನವಲಗುಂದ ಬಿಜೆಪಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಸಾಥ್ ನೀಡಿದರು...
!

_________________________

ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳ Conclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.