ನವದೆಹಲಿ: ಸಾರ್ವಜನಿಕ ಚುನಾವಣಾ ಸಭೆವೊಂದರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕುರಿತು ವಿವಾದಿತ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಗೆ ಇದೀಗ ಕೇಂದ್ರ ಚುನಾವಣಾ ಆಯೋಗ ಕ್ಲೀಚ್ ಚಿಟ್ ನೀಡಿದೆ.
ಉತ್ತರಪ್ರದೇಶದಲ್ಲಿ ಮಾತನಾಡಿದ್ದ ನಮೋ, ನಿಮ್ಮ ತಂದೆಯನ್ನ ಮಿ.ಕ್ಲೀನ್ ಎಂದು ಕರೆಯಲಾಗುತ್ತದೆ. ಆದರೆ ಅವರು ಸಾವನ್ನಪ್ಪಿದ್ದೇ ನಂ.1 ಭ್ರಷ್ಟಾಚಾರಿಯಾಗಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ನೀಡುತ್ತಿದ್ದಂತೆ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳು ಟೀಕಾಪ್ರಹಾರವನ್ನೇ ನಡೆಸಿದ್ದವು.
ಈ ಹೇಳಿಕೆ ಖಂಡಿಸಿ ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿತ್ತು. ಇದರ ವಿಚಾರಣೆ ನಡೆಸಿದ ಚುನಾವಣಾ ಆಯೋಗ, ಈ ಹೇಳಿಕೆಯಿಂದ ಯಾವುದೇ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ತಿಳಿಸಿದೆ.