ETV Bharat / briefs

ಕೊರೊನಾ ಡೇಂಜರ್ ಸ್ಪಾಟ್​ನ 10 ಜಿಲ್ಲೆಗಳಲ್ಲಿ ಭೌತಿಕ ತಪಾಸಣಾ ಕೇಂದ್ರ ಸ್ಥಾಪಿಸಲು ಚಿಂತನೆ - ವಾರ್ ರೂಂ ನಿರ್ವಹಣೆ ವಹಿಸಿರುವ ಸಚಿವರು

ಕೆಲ ಜಿಲ್ಲೆಗಳಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆ ಹೇಗೆ ನಡೆಯುತ್ತಿದೆ ಎಂಬುದರ ಮಾಹಿತಿ ಪಡೆಯಲಾಗಿದೆ. ಇದನ್ನು ಇನ್ನೂ ಪರಿಣಾಮಕಾರಿಯಾಗಿಸಲು ಪ್ರತಿ ಜಿಲ್ಲೆಯಲ್ಲೂ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ವಾರ್ಡ್ ವಾರು (ಟ್ರಯೇಜಿಂಗ್ ಸೆಂಟರ್) ಭೌತಿಕ ತಪಾಸಣಾ ಕೇಂದ್ರ ಆರಂಭಿಸುವ ಬಗ್ಗೆ ಜಿಲ್ಲಾಡಳಿತಗಳ ಅಭಿಪ್ರಾಯ ಮುಖ್ಯ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ.

 Establishment of Physical Inspection Center in 10 Districts of Corona Danger Spot

author img

By

Published : May 10, 2021, 6:55 PM IST

ಬೆಂಗಳೂರು : ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು, ಸದ್ಯ ವಾರ್ ರೂಂ ನಿರ್ವಹಣೆ ವಹಿಸಿರುವ ಸಚಿವರು ಹೊಸ ಹೊಸ ತಂತ್ರಗಳನ್ನ ರೂಪಿಸುತ್ತಿದ್ದಾರೆ. ಇದಕ್ಕಾಗಿ ಕೊರೊನಾ ಪರಿಸ್ಥಿತಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ಶೇಕಡ ನೂರರಷ್ಟು ಭೌತಿಕ ತಪಾಸಣಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ10 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ನಗರಸಭೆ ಆಯುಕ್ತರು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ದಕ್ಷಿಣ ಕನ್ನಡ, ಹುಬ್ಬಳ್ಳಿ-ಧಾರವಾಡ, ಗುಲ್ಬರ್ಗ, ದಾವಣಗೆರೆ, ಬೆಳಗಾವಿ,ಶಿವಮೊಗ್ಗ, ಮಡಿಕೇರಿ, ಉಡುಪಿ, ಮಂಡ್ಯ ಜಿಲ್ಲೆಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಅವರು, ಕೆಲ ಜಿಲ್ಲೆಗಳಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆ ಹೇಗೆ ನಡೆಯುತ್ತಿದೆ ಎಂಬುದರ ಮಾಹಿತಿ ಪಡೆಯಲಾಗಿದೆ. ಇದನ್ನು ಇನ್ನೂ ಪರಿಣಾಮಕಾರಿಯಾಗಿಸಲು ಪ್ರತಿ ಜಿಲ್ಲೆಯಲ್ಲೂ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ವಾರ್ಡ್ ವಾರು (ಟ್ರಯೇಜಿಂಗ್ ಸೆಂಟರ್) ಭೌತಿಕ ತಪಾಸಣಾ ಕೇಂದ್ರ ಆರಂಭಿಸುವ ಬಗ್ಗೆ ಜಿಲ್ಲಾಡಳಿತಗಳ ಅಭಿಪ್ರಾಯ ಮುಖ್ಯ ಎಂದರು.

ಜಿಲ್ಲಾಮಟ್ಟದಲ್ಲಿ ಭೌತಿಕ ತಪಾಸಣಾ ಕೇಂದ್ರ ಆರಂಭಕ್ಕೆ ಬೇಕಾದ ಮೂಲ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲ ಲಭ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ತಿಳಿಸುವಂತೆ ಸೂಚಿಸಿದರು. ಸಂಚಾರಿ ತಪಾಸಣಾ ಕೇಂದ್ರ ಆರಂಭಿಸುವುದು ಕುರಿತಂತೆ ಅನೇಕ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ ಸಚಿವ ಅರವಿಂದ ಲಿಂಬಾವಳಿ ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.