ETV Bharat / briefs

ಪಿಯು ಮೌಲ್ಯಾಂಕನ ಅವಧಿ ವಿಸ್ತರಣೆ, ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಶೀಘ್ರ ಪ್ರಕಟ - ಪಿಯುಸಿ ಪರೀಕ್ಷೆ

ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕು. ಆದರೆ ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಲಾಕ್​ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
author img

By

Published : Jun 14, 2021, 5:02 PM IST

ಬೆಂಗಳೂರು: ಶಾಲಾರಂಭದ ಕುರಿತು ಈಗಾಗಲೇ ಮಾರ್ಗಸೂತ್ರಗಳನ್ನು ಹೊರಡಿಸಲಾಗಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್​ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ಅಂತಹ ಜಿಲ್ಲೆಗಳ ಶಿಕ್ಷಕರು ಲಾಕ್​ಡೌನ್​ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕು. ಆದರೆ ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಲಾಕ್​ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌ ಎಂದರು.

ಮೊದಲ‌ ಪಿಯು ಮೌಲ್ಯಾಂಕನ ಅವಧಿ ವಿಸ್ತರಣೆ: ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲಾ ಜಿಲ್ಲೆಗಳ ಲಾಕ್​ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ‌. ಈ ಕುರಿತಂತೆ ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಅವರು ಕ್ರಮ‌‌ ಜರುಗಿಸಲಿದ್ದಾರೆ ಎಂದು ಹೇಳಿದರು.

ಚೈಲ್ಡ್ ಪ್ರೊಫೈಲ್ ನಿಯಮಿತ ದಾಖಲೆ: ಈ ಬಾರಿ ನಿಗದಿತ ಅವಧಿಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ಸಮರ್ಥವಾಗಿ ಜಾರಿಯಲ್ಲಿಡುವ ಅವಶ್ಯಕತೆ ಇದೆ. ಪ್ರತಿ ಸೂಚಿತ ಅವಧಿಗೆ ವಿದ್ಯಾರ್ಥಿಗಳ ಚೈಲ್ಡ್ ಪ್ರೊಫೈಲ್​ಗಳನ್ನು ನಿಯಮಿತವಾಗಿ ದಾಖಲಿಸುವ, ಕಲಿಕಾ ಸಾಮರ್ಥ್ಯಗಳನ್ನು ಅಳೆಯುವ ಮಾನದಂಡಗಳಾಗಿ ರೂಪಿಸುವ ಸದೃಢ ವ್ಯವಸ್ಥೆಯನ್ನು ಜಾರಿಯಲ್ಲಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅತ್ಯವಶ್ಯಕವಾಗಿದ್ದು, ಇಂಥಹ ಸಂದರ್ಭದಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಮಂಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ‌ ಸಂವಾದ: ಈ ಬಾರಿಯ ಎರಡು ದಿನಗಳ ಎಸ್.ಎಸ್.ಎಲ್.ಸಿ. ಪರೀಕ್ಷೆ ನಿರ್ವಹಣೆ ಕುರಿತಂತೆ ಜೂ. 28 ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ಸಭೆ ನಡೆಯಲಿದೆ. ಈ ಸಭೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖೆಯ ಆಯುಕ್ತರು ಆಗಮಿಸಲಿದ್ದಾರೆ. ಇಲ್ಲಿ ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಕ್ರಮಗಳ ಕುರಿತು ವಿಸ್ತ್ರತ ಚರ್ಚೆ ನಡೆಸಿ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು.

ಕೊಠಡಿ ಮೇಲ್ವಿಚಾರಕ ಶಿಕ್ಷಕರಿಗೆ ಕೋವಿಡ್ ಲಸಿಕೆ: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರಿಗೆ ಕೋವಿಡ್ - 19ರ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮುನ್ನ ಪೂರ್ಣಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ವಹಿಸಬೇಕೆಂದೂ ಸೂಚಿಸಲಾಗಿದೆ ಎಂದು ಹೇಳಿದರು.

ಶಿಕ್ಷಕರ‌ ವರ್ಗಾವಣಾ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟ : ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು

ಪ್ಯಾಕೇಜ್ ಪರಿಹಾರ ನೇರ‌ ಶಿಕ್ಷಕರ‌ ಖಾತೆಗೆ: ಖಾಸಗಿ ಶಾಲಾ ಶಿಕ್ಷಕರಿಗೆ ಮುಖ್ಯಮಂತ್ರಿ ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಕ್ಲಪ್ತ ಸಮಯದಲ್ಲಿ ಫಲಾನುಭವಿಗಳ ಖಾತೆಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕೈಗೊಳ್ಳಬೇಕು. ಶಿಕ್ಷಕ, ಶಿಕ್ಷಕೇತರ ಹಾಗೂ ಅತಿಥಿ ಶಿಕ್ಷಕರ‌‌ ಬ್ಯಾಂಕ್‌ ಖಾತೆಗಳ‌ ವಿವರಗಳನ್ನು ಶೀಘ್ರ ಸಂಗ್ರಹಿಸಿಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಣೆಯಾಗಬೇಕು ಎಂದು‌ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.