ETV Bharat / briefs

ಭೂ ಸುಧಾರಣಾ ಕಾಯ್ದೆ- ವಿದ್ಯುತ್ ಖಾಸಗೀಕರಣ ಕೈಬಿಡುವಂತೆ ರೈತರ ಪ್ರತಿಭಟನೆ - Power privatization

ರೈತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣಾ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.

Farmers protest in koppal
Farmers protest in koppal
author img

By

Published : Jun 29, 2020, 3:50 PM IST

ಕೊಪ್ಪಳ: ಇತ್ತೀಚೆಗೆ ತಂದಿರುವ ಕೆಲ ಕಾಯ್ದೆಗಳನ್ನ ಕೈಬಿಡುವಂತೆ ಒತ್ತಾಯಿಸಿ ರೈತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Farmers protest in koppal
ರೈತ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ
ಕೊರೊನಾದಿಂದ ಜನರು ತತ್ತರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣಾ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣವನ್ನು ಸುಗ್ರೀವಾಜ್ಞೆಗಳ ಮೂಲಕ ತಿದ್ದುಪಡಿ ಮಾಡುವ ಜರೂರತ್ತು ಏನಿತ್ತು? ಎಂದು ಪ್ರತಿಭಟನೆಕಾರರು ಪ್ರಶ್ನಿಸಿದರು.
ಭೂಸುಧಾರಣಾ ಕಾಯ್ದೆಯಿಂದ ಸಣ್ಣ ಹಾಗೂ ಮಧ್ಯಮ ವರ್ಗಗಳ ರೈತರ ಶೇಕಡಾ 80 ರಷ್ಟು ಭೂಮಿ ಬಹುರಾಷ್ಟ್ರೀಯ ಕಂಪನಿಗಳ ಪಾಲಾಗುತ್ತದೆ. ಈ ಭೂಸುಧಾರಣಾ ಕಾಯ್ದೆ ರೈತರ ಪಾಲಿಗೆ ಮರಣಶಾಸನವಾಗಿದೆ. ಇನ್ನು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ರೈತರು ಹಾಗೂ ರೈತ ಉತ್ಪನ್ನಗಳ ವರ್ತಕರು, ಕೂಲಿಕಾರರು ಹಾಗೂ ಖರೀದಿದಾರರು ಬೀದಿಗೆ ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ವಿದ್ಯುತ್ ಖಾಸಗಿಕರಣದಿಂದ ರೈತರ ಪಂಪ್ ಸೆಟ್​​​​ಗಳಿಗೆ ಮೀಟರ್ ಅಳವಡಿಸಲಾಗುತ್ತದೆ. ಪರಿಣಾಮ ರೈತರಿಗೆ ಕುತ್ತಾಗುತ್ತದೆ. ಬಡ ಜನರಿಗೆ ಹೊರೆಯಾಗುತ್ತದೆ. ಹೀಗಾಗಿ ವಿದ್ಯುತ್ ಖಾಸಗೀಕರಣ ಮಾಡುವುದನ್ನು ಕೈಬಿಡಬೇಕು ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಭೂಸುಧಾರಣಾ ಕಾಯ್ದೆಯನ್ನು ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.