ಚಿಕ್ಕಬಳ್ಳಾಪುರ: ಕಳೆದ ನಾಲ್ಕು ದಿನಗಳ ಹಿಂದೆ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿತ್ತು. ಆದರೆ ಇಂದು ಐದು ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ಜಿಲ್ಲಾಡಳಿಕ್ಕೆ ದೊಡ್ಡ ಶಾಕ್ ನೀಡಿದೆ.
ಚಿಂತಾಮಣಿ ತಾಲೂಕಿನ ಚಿನ್ನಸಂದ್ರದಲ್ಲಿ ಓರ್ವ ಮಹಿಳೆಗೆ ಹಾಗೂ ನಾಲ್ಕು ಜನ ಯುವತಿಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ.
ಸದ್ಯ ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕಿತರ ಏರಿಯಾಗಳನ್ನು ಸೀಲ್ ಡೌನ್ ಮಾಡಿ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಸೋಂಕಿತರು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 172 ಕ್ಕೆ ಏರಿಕೆಯಾಗಿದೆ.
ಕೊರೊನಾ ಕಾದಾಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ 5 ಜನರಲ್ಲಿ ಕಾಣಿಸಿಕೊಂಡ ಸೋಂಕು - Chikkaballapura corona updates
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು ಮತ್ತೆ 5 ಜನ ಕೊರೊನಾ ಸೊಂಕಿತರು ಪತ್ತೆಯಾಗಿದ್ದು, ಜಿಲ್ಲಾಡಳಿತ ಸೇರಿದಂತೆ ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವಾದಂತಿದೆ.