ರಾಯಚೂರು : ಕೋವಿಡ್ ಪ್ರಕರಣಗಳು ನಿಯಂತ್ರಣ ಮೀರಿ ವರದಿಯಾಗುತ್ತಿವೆ. ಅದಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಡಿ ಎಸ್ ಹೂಲಗೇರಿ ಹೇಳಿದರು.
ಲಿಂಗಸುಗೂರು ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಣ ಇಲಾಖೆ ನೀಡಿದ ನಿರ್ದೇಶನಗಳನ್ನು ಪಾಲಿಸಬೇಕು. ಪರೀಕ್ಷಾ ಕೇಂದ್ರದ ಒಳಗಡೆ ಹೋಗುವಾಗ ವಹಿಸುವ ಎಚ್ಚರಿಕೆ ಕ್ರಮಗಳನ್ನು ಮರಳಿ ಹೋಗುವಾಗಲು ಅನುಸರಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಕುಂಬಾರ ಮಾತನಾಡಿ, ತಾಲೂಕಿನಲ್ಲಿ 15 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. 224 ವಲಸೆ ಮಕ್ಕಳು ಸೇರಿದಂತೆ ಒಟ್ಟು 5748 ಮಕ್ಕಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಹಟ್ಟಿ ಚಿನ್ನದ ಗಣಿ ಸಂಸ್ಥೆ ವತಿಯಿಂದ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ನೀಡಿದ್ದಾರೆ. ಈ ಬಾರಿ ಸಾರಿಗೆ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ ಎಂದರು.