ಕಲಬುರಗಿ: ಲಾಕ್‌ಡೌನ್ ಸಂದರ್ಭದಲ್ಲಿ ಅನಾವಶ್ಯಕವಾಗಿ ಬೈಕ್ ಮೇಲೆ ಓಡಾಡುತ್ತಿದ್ದ 4 ಜನ ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಎಂಬಿ ನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಮ್ಮದ್ ಮುಕ್ರಂ, ಮೊಹಮ್ಮದ್ ತಬ್ರೆಜ್, ಖಾಜಾಖಾನ್ ಹಾಗೂ ಸೈಯದ್ ಸಲೀಂ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಿಂದ 4.4 ಲಕ್ಷ ಮೌಲ್ಯದ 11 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳು, ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅನಾವಶ್ಯಕವಾಗಿ ಬೈಕ್ಗಳಲ್ಲಿ ಓಡಾಡುತ್ತಿದ್ದರು. ಈ ವೇಳೆ, ಇವರನ್ನು ತಡೆದು ದಾಖಲಾತಿ ಪರಿಶೀಲನೆಗೆ ಪೊಲೀಸರು ಮುಂದಾದಾಗ ಆರೋಪಿಗಳ ನಿಜವಾದ ಬಣ್ಣ ಬಯಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.