ಹೈದರಾಬಾದ್: ಸರ್ಕಾರಿ ಶಾಲೆ ಮಕ್ಕಳಿಗೆ ಸೌಲಭ್ಯ ಸಿಗುತ್ತಿಲ್ಲ ಎಂಬ ಕೂಗುಗಳ ಮಧ್ಯೆಯೇ ತೆಲಂಗಾಣ ಸರ್ಕಾರ ಒಂದು ಒಳ್ಳೆಯ ನಿರ್ಧಾರ ಪ್ರಕಟಿಸುವ ಮೂಲಕ ದೇಶದ ಗಮನ ಸೆಳೆದಿದೆ.
ತೆಲಂಗಾಣದಲ್ಲಿರುವ ಒಟ್ಟು 20,012 ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಪಿಕಪ್ ಮತ್ತು ಡ್ರಾಪ್ ಸೇವೆಯನ್ನು ಈ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ ಸಿಎಂ ಕೆಸಿಆರ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ.
ತೆಲಂಗಾಣ ಸಮಗ್ರ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಈ ಮಕ್ಕಳನ್ನು ವ್ಯಾನ್ಗಳು ಅಥವಾ ಆಟೊ ರಿಕ್ಷಾ ಮೂಲಕ ಶಾಲೆ ತಲುಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ.
ತೆಲಂಗಾಣ ಸರ್ಕಾರ ಕೈಗೊಂಡಿರುವ ಈ ನಿರ್ಧಾರದ ಬಗ್ಗೆ ಸರ್ಕಾರಿ ಶಾಲೆ ಮಕ್ಕಳ ಪೋಷಕರು ಖುಷಿ ವ್ಯಕ್ತಪಡಿಸಿದ್ದು, ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ.