ಬೆಂಗಳೂರು: ರಾಜ್ಯಾದ್ಯಂತ ಲಾಕ್ಡೌನ್ ಘೋಷಣೆಯಾಗಿದೆ. ಈ ನಡುವೆ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 27 ಮಂದಿಯನ್ನು ಬಂಧಿಸಿದ್ದಾರೆ.
ಹಲಸೂರು ಮುಖ್ಯ ರಸ್ತೆಯ ಪಾಮ್ ಟ್ರೀ ಹೋಟೆಲ್ನಲ್ಲಿ ಜೂಜಾಟ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಹೋಟೆಲ್ ಮ್ಯಾನೇಜರ್ ಸೇರಿ 27 ಮಂದಿಯನ್ನು ಬಂಧಿಸಿದ್ದಾರೆ.
ಕೊರೊನಾ ಲಾಕ್ಡೌನ್ ಇದ್ದರೂ ಹೋಟೆಲ್ನಲ್ಲಿ ಜನರನ್ನು ಸೇರಿಸಿ ಜೂಜಾಟ ನಡೆಸುತ್ತಿದ್ದರು. ಬಂಧಿತರಿಂದ 5 ಲಕ್ಷ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತರನ್ನು ಇಂದಿರಾನಗರ ಪೊಲೀಸರಿಗೆ ಒಪ್ಪಿಸಲಾಗಿದೆ.