ETV Bharat / briefs

ದಾವಣಗೆರೆ: ಸರಳವಾಗಿ ಮಹಾತ್ಮ ಗಾಂಧಿ ಜಯಂತಿ ಆಚರಣೆ - mahatma gandhi jayanti

ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಕೋವಿಡ್ ಹಿನ್ನೆಲೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಅನ್ವಯ ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

Davanagere
Davanagere
author img

By

Published : Oct 2, 2020, 4:12 PM IST

ದಾವಣಗೆರೆ: 'ಮತ್ತೊಬ್ಬರಲ್ಲಿ ಕಾಣ ಬಯಸುವ ಬದಲಾವಣೆ ಮೊದಲು ನಿನ್ನಲ್ಲಿ ಆಗಲಿ’ ಎಂಬ ಗಾಂಧೀಜಿಯವರ ತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸುಧಾರಣೆ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದರು.

ಮಹಾನಗರ ಪಾಲಿಕೆ ಆವರಣದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಅನ್ವಯ ಸರಳವಾಗಿ ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಂಧಿ ತತ್ವಗಳು, ಮೌಲ್ಯಗಳು ಎಂದಿಗೂ ಆದರ್ಶಪ್ರಾಯ. ಸತ್ಯ, ಅಹಿಂಸೆ, ಧರ್ಮದ ಮಾರ್ಗದಲ್ಲಿ ನಾವೆಲ್ಲರೂ ನಡೆಯುವ ಪ್ರಯತ್ನವನ್ನು ಮಾಡಬೇಕು. ಸತ್ಯದ ಮಾರ್ಗವನ್ನು ಮೊದಲು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು. ಧರ್ಮದ, ಶಾಂತಿಯ ಮಾರ್ಗವನ್ನು ಮೊದಲು ನಮ್ಮಲ್ಲಿ ನಾವು ಅಳವಡಿಸಿಕೊಂಡಲ್ಲಿ ಗಾಂಧೀಜಿಯವರ ರಾಮ ರಾಜ್ಯದ ಕನಸು ನನಸಾಗುವುದು ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಗಾಂಧಿಯವರು ‘ನನ್ನ ಬದುಕೇ ನನ್ನ ಸಂದೇಶ’ ಎನ್ನುವ ರೀತಿಯಲ್ಲಿ ಬದುಕಿದರು. ಅವರ ಮೌಲ್ಯಗಳು, ತತ್ವಾದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನಮ್ಮ ವೈಯಕ್ತಿಕ ಮತ್ತು ವೃತ್ತಿ ಜೀವನ ಆದರ್ಶಪ್ರಾಯವಾಗುತ್ತದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.