ETV Bharat / briefs

ಶುರುವಾಯ್ತು ಸಚಿವಸ್ಥಾನದ ಲಾಬಿ, ನಮಗೂ ಕೊಡಿ ಎಂದ್ರು ಹಿಟ್ನಾಳ್

ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಕೊಪ್ಪಳದಿಂದ ಒಬ್ಬರಿಗಾದ್ರೂ ಸಚಿವ ಸ್ಥಾನ ನೀಡಬೇಕು ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಆಗ್ರಹಿಸಿದ್ದಾರೆ.

ಶಾಸಕ ರಾಘವೇಂದ್ರ ಹಿಟ್ನಾಳ್
author img

By

Published : Jun 1, 2019, 5:57 PM IST

ಕೊಪ್ಪಳ: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಅಥವಾ ಪುನರಚನೆಯಲ್ಲಿ ಭಯ್ಯಾಪೂರ ಅಥವಾ ನನಗೆ ಸಚಿವ ಸ್ಥಾನ ನೀಡಬೇಕಂದು ಹಿರಿಯ ನಾಯಕರಲ್ಲಿ ಮನವಿ ಮಾಡಿರುವುದಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.

ಶಾಸಕ ರಾಘವೇಂದ್ರ ಹಿಟ್ನಾಳ್ ಪ್ರತಿಕ್ರಿಯೆ

ತಾಲೂಕಿನ ಹುನಕುಂಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ನಮ್ಮ ಜಿಲ್ಲೆಗೂ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆ. ನಾವೂ ಸಚಿವ ಸ್ಥಾನದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತೇವೆ. ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಹಾಗೂ ನನಗೆ ಇಬ್ಬರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಲು ಕೋರಿದ್ದೇವೆ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಇಲ್ಲಿನವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಪಕ್ಷದ‌ ಮುಖಂಡರಿಗೆ ಕೇಳಿದ್ದೇವೆ. ಜತೆಗೆ ಇನ್ನೂ ಅನೇಕ ಹಿರಿಯ ಸಚಿವ ಸ್ಥಾನದ ಆಕಾಂಕ್ಷಿಗಳು ಇರುವುದರಿಂದ ಹೈಕಮಾಂಡ್​ ತೆಗೆದುಕೊಳ್ಳುವ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಅವರು ಸೂಚ್ಯವಾಗಿಯೇ ಹೇಳಿದರು.

ಜಿಲ್ಲೆಯ ಬಿಜೆಪಿ ಶಾಸಕರೊಬ್ಬರನ್ನು ಕಾಂಗ್ರೆಸ್ ಕರೆತರಲಾಗುತ್ತದೆ ಎಂಬುದೆಲ್ಲ ಸುಳ್ಳು. ಯಾರಾದರೂ ನಮ್ಮ ಸಿದ್ಧಾಂತ ಒಪ್ಪಿ ಬರುವಂತಿದ್ದರೆ ನೀವೇ ತಿಳಿಸಿ ಎಂದು ಹಿಟ್ಲಾಳ್ ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದರು.

Intro:

Body:ಕೊಪ್ಪಳ:- ನನಗೂ ವಯಸ್ಸಿದೆ. ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವಿದೆ. ಆದರೆ, ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಹೇಳಿದ್ದಾರೆ. ತಾಲೂಕಿನ ಹನಕುಂಟಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ನಮ್ಮ ಜಿಲ್ಲೆಗೂ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆ. ನಮ್ಮ ಜಿಲ್ಲೆಯಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಹಾಗೂ ನಾನು ಇದ್ದೇವೆ‌ ಇಬ್ಬರಲ್ಲಿ ಯಾರಿಗಾದರೂ ಸಚಿವ ಸ್ಥಾನ ಸಿಕ್ಕರೂ ಸಂತೋಷ. ಅಭಿವೃದ್ಧಿ ದೃಷ್ಠಿಯಿಂದ ನಮ್ಮ ಇಲ್ಲಿನವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಪಕ್ಷದ‌ ಮುಖಂಡರಿಗೆ ಮನವಿ ಮಾಡಿದ್ದೇವೆ. ನನಗೆ ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ. ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಅನೇಕ ಸೀನಿಯರ್ಗಳು ಇದ್ದಾರೆ. ಹೀಗಾಗಿ ಪಕ್ಷದ ಮುಖಂಡರು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು. ಆಯಾ ಪಕ್ಷಗಳಲ್ಲಿ ಅಸಮಾಧಾನಗೊಂಡ ಅನೇಕ ಶಾಸಕರಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರನ್ನು ಕಾಂಗ್ರೆಸ್ ಕರೆತರಲಾಗುತ್ತದೆ ಎಂಬ ಮಾತು ಸುಳ್ಳು. ನೀವೇ ಮಾಧ್ಯಮದವರು ಹೀಗೆ ಹೇಳುತ್ತಿದ್ದೀರಿ. ರಾಜ್ಯ ಸಮ್ಮಿಶ್ರ ಸರ್ಕಾರ ಬೀಳುತ್ತದೆ ಎನ್ನುವುದು ಮಾಧ್ಯಮಗಳಲ್ಲಿ ಮಾತ್ರ. ಯಾವ ಶಾಸಕರು ಸಹ ತಮ್ಮ ತಮ್ಮ ಪಕ್ಷದ ಸಿದ್ದಾಂತ ಬಿಡಲು ತಯಾರಿಲ್ಲ. ತಮ್ಮ ಪಕ್ಷ ಬಿಟ್ಟು ನಮ್ಮ ಪಕ್ಷಕ್ಕೆ ಬರುವವರು ನಮ್ಮ ತತ್ವ ಸಿದ್ಧಾಂತವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಒಂದು ವೇಳೆ ಆ ಪಕ್ಷದಲ್ಲಿ ನೊಂದುಕೊಂಡು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುವ ಖಚಿತ ಮಾಹಿತಿ ಮಾಧ್ಯಮದವರಿಗೆ ಇದ್ದರೆ ಹೇಳಿ. ಇದರಿಂದ ನಮ್ಮ ಸಮಿಶ್ರ ಸರ್ಕಾರ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.