ETV Bharat / briefs

ಫಾಲ್ಕನ್​ ಟಯರ್ಸ್​ ಪುನಶ್ಚೇತನಕ್ಕೆ ಸರ್ಕಾರದ ನೆರವು:  ಸಿಎಂ ಭರವಸೆ

ಮೈಸೂರಿನ ಫಾಲ್ಕನ್ ಟಯರ್ಸ್​ ಪುನಶ್ಚೇತನಕ್ಕೆ ಸರ್ಕಾರದಿಂದ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದರು. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ಅವರು ತಿಳಿಸಿದರು.

ಗೃಹ ಕಚೇರಿಯಲ್ಲಿ ಸಿಎಂ ಸಭೆ
author img

By

Published : May 28, 2019, 9:47 PM IST

ಬೆಂಗಳೂರು: ಮೈಸೂರಿನ ಫಾಲ್ಕನ್ ಟಯರ್ಸ್ ಪುನಶ್ಚೇತನಕ್ಕೆ ಸರ್ಕಾರ ಸಿದ್ಧವಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಫಾಲ್ಕನ್​ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಫಾಲ್ಕನ್​ ಟಯರ್ಸ್​​ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯನ್ನು ಪ್ರಾರಂಭಿಸಲು ಸುಮಾರು 120 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ಹಾಗೂ ಕಚೇರಿಯ ಮೂಲಭೂತ ಸೌಕರ್ಯಕ್ಕಾಗಿ 20 ಕೋಟಿ ರೂ.ಗಳ ವೆಚ್ಚದ

bgl
ಗೃಹ ಕಚೇರಿಯಲ್ಲಿ ಸಿಎಂ ಸಭೆ
ಅಗತ್ಯವಿದೆ. ತಾಂತ್ರಿಕ ಪರಿಣಿತಿ ಹೊಂದಿದ 3700 ಕಾರ್ಮಿಕರು ಲಭ್ಯವಿದ್ದಾರೆ ಎಂದು ಪಾಲ್ಕನ್​ ಕಂಪನಿ ಮಾಹಿತಿ ನೀಡಿದೆ ಎಂದು ಸಭೆಗೆ ಸಿಎಂ ತಿಳಿಸಿದರು. ಇದಕ್ಕಾಗಿ 150 ಕೋಟಿ ರೂ. ದುಡಿಯುವ ಬಂಡವಾಳದ ಅಗತ್ಯವಿದ್ದು. ವ್ಯವಸ್ಥಾಪಕ ಮಂಡಳಿಯನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಬಹುದು ಎಂದು ಸಭೆಯಲ್ಲಿ ಮಾಹಿತಿ ನೀಡಿದರು. ಕಾರ್ಖಾನೆಯ ಪುನಶ್ಚೇತನಕ್ಕೆ ಎಲ್ಲ ನೆರವು ನೀಡುವುದಾಗಿಯೂ ಇದೇ ವೇಳೆ ಸಿಎಂ ಭರವಸೆ ನೀಡಿದರು.

ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐಎಸ್ಎನ್ ಪ್ರಸಾದ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಫಾಲ್ಕನ್​ ಟಯರ್ಸ್​​​​ ಕಾರ್ಖಾನೆಯ ಪ್ರತಿನಿಧಿಗಳು ಇದ್ದರು.

Intro:ಬೆಂಗಳೂರು : ಮೈಸೂರಿನ ರೋಗಗ್ರಸ್ತ ಕಾರ್ಖಾನೆ ಫ್ಯಾಲ್ಕನ್ ಟಯರ್ಸ್ ಪುನಶ್ಚೇತನಕ್ಕೆ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.Body:ಗೃಹಕಚೇರಿ ಕೃಷ್ಣಾದಲ್ಲಿ ಇಂದು ಫ್ಯಾಲ್ಕನ್ ಟೈರ್ಸ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫ್ಯಾಲ್ಕನ್ ಟೈರ್ಸ್ ಕಾರ್ಖಾನೆಯನ್ನು ಈಗ ಪುನರಾರಂಭಿಸಿದಲ್ಲಿ ಕಾರ್ಖಾನೆಯನ್ನು
ನಡೆಸಲು ಸುಮಾರು 3700 ತಾಂತ್ರಿಕ ಪರಿಣಿತಿಯನ್ನು ಹೊಂದಿರುವ ಕಾರ್ಮಿಕರು ಮುಂದೆ ಬಂದಿದ್ದು, ಕಾರ್ಖಾನೆಯನ್ನು ಪ್ರಾರಂಭಿಸಲು ಸುಮಾರು 120 ಕೋಟಿ ರೂ.ಗಳ ಬ್ಯಾಂಕ್ ಗ್ಯಾರಂಟಿ ಹಾಗೂ ಕಚೇರಿಯ ಮೂಲಭೂತ ಸೌಕರ್ಯಕ್ಕಾಗಿ 20 ಕೋಟಿ ರೂ.ಗಳ ವೆಚ್ಚದ
ಅಗತ್ಯವಿದೆ. ಇದಲ್ಲದೆ 150 ಕೋಟಿ ರೂ.ಗಳ ದುಡಿಯುವ ಬಂಡವಾಳದ ಅಗತ್ಯವಿದೆ. ಕಾರ್ಖಾನೆಗೆ ವ್ಯವಸ್ಥಾಪಕ ಮಂಡಳಿಯನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಬಹುದಾಗಿದೆ
ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.
ಫ್ಯಾಲ್ಕನ್ ಟೈರ್ಸ್ ಕಾರ್ಖಾನೆಯನ್ನು ಪುನರಾರಂಭಿಸಲು ಸುಮಾರು 3700 ಕಾರ್ಮಿಕರು ಮುಂದೆ ಬಂದಿರುವುದು ಪ್ರಶಂಸನೀಯ ಎಂದು ಮುಖ್ಯಮಂತ್ರಿಗಳು, ಕಾರ್ಖಾನೆಯ ಪುನಶ್ಚೇತನಕ್ಕೆ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಆರ್ಥಿಕ ಇಲಾಖೆ ಅಪರ ಮುಖ್ಯ
ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಫ್ಯಾಲ್ಕನ್ ಟೈರ್ಸ್
ಕಾರ್ಖಾನೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.