ETV Bharat / briefs

ಕೋಚಿಂಗ್​ ಸೆಂಟರ್​ನಲ್ಲಿ ಬೆಂಕಿ:19 ವಿದ್ಯಾರ್ಥಿಗಳ ಸಾವು,ಪ್ರಾಣ ರಕ್ಷಣೆಗೆ ಕಟ್ಟಡದಿಂದ ಜಿಗಿದ ಸ್ಟೂಡೆಂಟ್ಸ್​! - ಸಜೀವ ದಹನ

ಕಟ್ಟಡದಲ್ಲಿದ್ದ 50 ಮಕ್ಕಳ ರಕ್ಷಣೆ ಮಾಡಲಾಗಿದ್ದು,ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

ಕೋಚಿಂಗ್​ ಸೆಂಟರ್​ನಲ್ಲಿ ಬೆಂಕಿ
author img

By

Published : May 24, 2019, 6:23 PM IST

Updated : May 24, 2019, 7:58 PM IST

ಸೂರತ್​:ಕೋಚಿಂಗ್​ ಸೆಂಟರ್​ಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪರಿಣಾಮ 19ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಜೀವ ದಹನಗೊಂಡಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳು ಕಟ್ಟಡದಿಂದ ಹಾರುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಸ್ಥಳಕ್ಕೆ ಈಗಾಗಲೇ 18 ಆಗ್ನಿಶಾಮಕದಳ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಕೋಚಿಂಗ್​ ಸೆಂಟರ್​ನಲ್ಲಿ ಬೆಂಕಿ ಅನಾಹುತ

ಕಟ್ಟಡದಲ್ಲಿದ್ದ 50 ವಿದ್ಯಾರ್ಥಿಗಳ ರಕ್ಷಣೆ ಮಾಡಲಾಗಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಬೆಂಗಳೂರಿನ ಕಾರ್ಲ್‌ಟೌನ್​ ಕಟ್ಟಡದಲ್ಲಿ ಈ ಹಿಂದೆ ಇದೇ ರೀತಿಯ ಅಗ್ನಿ ಆಕಸ್ಮಿಕ ನಡೆದಿತ್ತು. ಅದನ್ನು ನೆನಪಿಸುವ ರೀತಿಯಲ್ಲಿ ಈ ದುರ್ಘಟನೆ ನಡೆದಿದೆ.

  • Extremely anguished by the fire tragedy in Surat. My thoughts are with bereaved families. May the injured recover quickly. Have asked the Gujarat Government and local authorities to provide all possible assistance to those affected.

    — Narendra Modi (@narendramodi) May 24, 2019 " class="align-text-top noRightClick twitterSection" data=" ">
ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ವಿಜಯ್​ ರೂಪಾನಿ ತನಿಖೆಗೆ ಆದೇಶ ನೀಡಿದ್ದು, ಮೃತರ ಕುಟುಂಬಕ್ಕೆ 4ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಸೂರತ್​ ಪೊಲೀಸ್ಕ ಮಿಷರನ್​ ನೀಡಿರುವ ಮಾಹಿತಿ ಪ್ರಕಾರ ಘಟನೆಯಲ್ಲಿ 19 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದು, ಬೆಂಕಿ ಅನಾಹುತ ನಡೆದಿರುವುದು ನಿಜಕ್ಕೂ ದುರದೃಷ್ಟಕರ. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ, ಗುಜರಾತ್​ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಎಲ್ಲ ರೀತಿಯ ಸಹಾಯ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಿಎಂ ರೂಪಾಣಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಧನವನ್ನು ಘೋಷಣೆ ಮಾಡಿದ್ದಾರೆ. ಇತ್ತ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳ ಚಿಕಿತ್ಸೆಗಾಗಿ ದೆಹಲಿ ಏಮ್ಸ್​​ನಿಂದ ವೈದ್ಯರ ತಂಡ ಕರೆತರಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Intro:Body:

ಸೂರತ್​: ಕೋಚಿಂಗ್​ ಸೆಂಟರ್​ಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಜೀವ ದಹನಗೊಂಡಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. 

ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳು ಕಟ್ಟಡದಿಂದ ಹಾರುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಸ್ಥಳಕ್ಕೆ ಈಗಾಗಲೇ 18 ಆಗ್ನಿಶಾಮಕದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನವಾಗಿವೆ. 

ಕಟ್ಟಡದಲ್ಲಿದ್ದ 50 ಮಕ್ಕಳ ರಕ್ಷಣೆ ಮಾಡಲಾಗಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಬೆಂಗಳೂರಿನ ಕಾಲ್​ಟೌನ್​ ಕಟ್ಟಡದಲ್ಲಿ ಈ ಹಿಂದೆ ಕೂಡ ಇದೇ ರೀತಿಯ ಅಗ್ನಿ ಆಕಸ್ಮಿಕ ನಡೆದಿತ್ತು. ಅದನ್ನ ನೆನಪಿಸುವ ರೀತಿಯಲ್ಲಿ ಈ ಘಟನೆ ನಡೆದಿದೆ. 

ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ವಿಜಯ್​ ರೂಪಾನಿ ತನಿಖೆಗೆ ಆದೇಶ ನೀಡಿದ್ದು, ಮೃತರ ಕುಟುಂಬಕ್ಕೆ 4ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಸೂರತ್​ ಪೊಲೀಸ್​ ಕಮಿಷರನ್​ ನೀಡಿರುವ ಮಾಹಿತಿ ಪ್ರಕಾರ ಘಟನೆಯಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ. 

Conclusion:
Last Updated : May 24, 2019, 7:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.