ಬೆಳಗಾವಿ: ಲಾಕ್‌ಡೌನ್‌ನಿಂದ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಕೈ ಮಗ್ಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ವಡಗಾವಿಯ ಲಕ್ಷ್ಮಿ ನಗರದ ನಿವಾಸಿ ಸುಜಿತ್ ಉಪರಿ (38) ನೇಣಿಗೆ ಶರಣಾದ ವ್ಯಕ್ತಿ. ಮನೆಯಲ್ಲೇ ಸುಜಿತ್ ಆತ್ಮಹತ್ಯೆ ಮಾಡಿಕೊಂಡಿದ್ದು, ನಾಲ್ಕು ದಿನಗಳ ಬಳಿಕ ಮೃತದೇಹವನ್ನು ಹೊರ ತೆಗೆಯಲಾಗಿದೆ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರದಯಲ್ಲಿನ ವಿದ್ಯುತ್ ಮಗ್ಗಗಳು ಬಂದ್ ಆಗಿದ್ದವು. ಈ ಮೊದಲು ವಿದ್ಯುತ್ ಮಗ್ಗವಿದ್ದ ನೇಕಾರರ ಬಳಿ ಕೆಲಸಕ್ಕೆ ಹೋಗುತ್ತಿದ್ದ ಸುಜಿತ್ ಕೆಲಸ ಇಲ್ಲದೇ ಕುಟುಂಬ ನಿರ್ವಹಣೆಗೆ ಕೈ ಸಾಲ ಮಾಡಿದ್ದರು. ಇದನ್ನು ತೀರಿಸಲು ಸಾಧ್ಯವಾಗದೇ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.