ಬೆಂಗಳೂರು: ರಾಜ್ಯದ ಕೋವಿಡ್ ಸ್ಥಿತಿಗತಿಯ ಕುರಿತು ಮಾಹಿತಿ ಪಡೆಯಲು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದೂ ಸಹ ಆನ್‌ಲೈನ್ ಸಭೆ ನಡೆಸಿದರು.
ಈ ಸಭೆಯಲ್ಲಿ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆ ವ್ಯಾಪ್ತಿಯ ಶಾಸಕರು, ಪರಿಷತ್ ಸದಸ್ಯರು, ಸ್ಥಳೀಯ ನಾಯಕರು ಭಾಗಿಯಾಗಿದ್ದರು.
ಚಿಕಿತ್ಸೆ, ಔಷಧ, ಲಸಿಕೆ ಅಭಿಯಾನ, ಆಹಾರ ಪೂರೈಕೆ ಕುರಿತು ಪಕ್ಷದ ನಾಯಕರಿಂದ ಮಾಜಿ ಸಿಎಂ ಕುಮಾರಸ್ವಾಮಿ ಮಾಹಿತಿ ಪಡೆದರು.