ಬೆಂಗಳೂರು: ಕೊರೊನಾ ನಿರ್ವಹಣಾ ಜವಾಬ್ದಾರಿಯನ್ನು ಐದು ಮಂದಿ ಹಿರಿಯ ಸಚಿವರ ಹೆಗಲಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ತುರ್ತು ವಿಶೇಷ ಸಚಿವ ಸಂಪುಟ ಸಭೆ ಬಳಿಕ ಸಿಎಂ, ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹೊರತುಪಡಿಸಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಹಿರಿಯ ಸಚಿವರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಅರವಿಂದ ಲಿಂಬಾವಳಿ ಅವರಿಗೆ ಕೋವಿಡ್ ನಿರ್ವಹಣೆ ಜವಾಬ್ದಾರಿ ವಹಿಸಿರುವುದಾಗಿ ಘೋಷಿಸಿದರು.
ಚಾಮರಾಜನಗರ ಆಕ್ಸಿಜನ್ ದುರಂತದ ನಂತರ ಸುಧಾಕರ್ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರಿಗೆ ಯಾವುದೇ ಜವಾಬ್ದಾರಿ ನೀಡಲಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ.