ಗದಗ: ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಪರಿಣಾಮ ನರಗುಂದ ತಾಲೂಕಿನಲ್ಲಿನರುವ ಬೆಣ್ಣೆಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಗ್ರಾಮದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಗುಂದ ವಿಧಾನಸಭಾ ಕ್ಷೇತ್ರದ ಕುರ್ಲಗೇರಿ, ಯಾವಗಲ್ ಸೇರಿದಂತೆ ಹಲವು ಗ್ರಾಮದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ.
ಒಂದೆಡೆ ಮಲಪ್ರಭಾ ನದಿಯ ನೀರಿನ ಹರಿವು, ಮತ್ತೊಂದೆಡೆ ಬೆಣ್ಣೆಹಳ್ಳದ ಸುತ್ತಮುತ್ತ ಜನರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಈ ಗ್ರಾಮಗಳ ಜನರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಾಗಿದೆ.