ETV Bharat / briefs

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇಂದು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಕೋಲಾರದಲ್ಲಿ 10 ಸೆಂ. ಮೀ, ಭಟ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

author img

By

Published : May 21, 2021, 7:13 PM IST

Bengaluru weather
Bengaluru weather

ಬೆಂಗಳೂರು: ನಗರದಾದ್ಯಂತ ಸಂಜೆ ಸುಮಾರು 5 ಗಂಟೆಯಿಂದ ಮಳೆ ಪ್ರಾರಂಭವಾಗಿದ್ದು ವಸಂತನಗರ, ರಾಜಾಜಿನಗರ, ಮಲೇಶ್ವರ ಸೇರಿದಂತೆ ಹಲವೆಡೆ ಗುಡುಗು ಸಹಿತ ವರ್ಷಧಾರೆಯಾಗುತ್ತಿದೆ.

ಆರ್.ಆರ್. ನಗರ, ಬಿಟಿಎಂ ಲೇಔಟ್, ಬಸವನಗುಡಿ, ಯಶವಂತಪುರ, ಪೀಣ್ಯದಲ್ಲಿ ಗಾಳಿ ಸಹಿತ ಗುಡುಗು ಮಳೆಯಾಗಿರುವುದು ವರದಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ತಣ್ಣಗಿನ ವಾತಾವರಣ ಸಾಯಂಕಾಲದಿಂದ ಅನುಭವವಾಗುತ್ತಿದೆ.

ಇನ್ನು ಕರಾವಳಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುತ್ತಿದ್ದು ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಎಡೆ ಬಿಡದೆ ಸುರಿಯುತ್ತಿದೆ. ರಾಜಧಾನಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆ: ಇಂದು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಕೋಲಾರದಲ್ಲಿ 10 ಸೆಂ. ಮೀ, ಭಟ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಟಾಂಶ 36.4 ಡಿಗ್ರಿ, ರಾಯಚೂರು 36 ಡಿಗ್ರಿ, ವಿಜಯಪುರದಲ್ಲಿ 35.4 ಡಿಗ್ರಿ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಮೇ 25ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಅಂದಾಜಿಸಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಮೇ 21 ರಿಂದ 23ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಲಿದೆ. ಮೇ 24 ಹಾಗೂ 25 ರಂದು ತಾತ್ಕಾಲಿಕವಾಗಿ ಮಳೆಯ ಪ್ರಮಾಣ ತಗ್ಗುವ ಸಾಧ್ಯತೆ ಇದೆ.

ಮೇ 21 ಹಾಗೂ 22 ರಂದು ದಕ್ಷಿಣ ಜಿಲ್ಲೆಗಳಾದ ಬೆಂಗಳೂರು, ರಾಮನಗರ, ಚಾಮರಾಜನಗರ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿಯಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.