ETV Bharat / briefs

ಕೋವಿಡ್ ಲಸಿಕೆ ಪ್ರಶ್ನಿಸಿ ಪಿಐಎಲ್: ಅರ್ಜಿದಾರರಿಗೆ 50 ಸಾವಿರ ದಂಡ ವಿಧಿಸಿದ ಹೈಕೋರ್ಟ್ - Bangalore

ಮುಖ್ಯವಾಗಿ ಕಳೆದ ಜನವರಿಯಿಂದಲೇ ಲಸಿಕೆ ಅಭಿಯಾನ ಆರಂಭವಾಗಿದ್ದರೂ, ಅರ್ಜಿದಾರರು ಮೇ ತಿಂಗಳಲ್ಲಿ ಬಂದು ಲಸಿಕೀಕರಣಕ್ಕೆ ತಡೆ ನೀಡಲು ಕೋರಿರುವುದು ಸರಿಯಲ್ಲ. ದೇಶದಲ್ಲಿ ಲಕ್ಷಾಂತರ ಜನ ಲಸಿಕೆಗಾಗಿ ಕಾಯುತ್ತಿರುವ ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿ ನ್ಯಾಯಾಲಯದ ಸಮಯ ವ್ಯರ್ಥಮಾಡುವ ಪ್ರಯತ್ನವೆಂದು ಅಭಿಪ್ರಾಯಪಟ್ಟು, ಅರ್ಜಿ ವಜಾ ಮಾಡಿ, ಅರ್ಜಿದಾರರಿಗೆ 50 ಸಾವಿರ ದಂಡ ವಿಧಿಸಿತು.

 High Court dismissed the PIL which against Covid vaccine

author img

By

Published : May 26, 2021, 9:37 PM IST

Updated : May 26, 2021, 10:31 PM IST

ಬೆಂಗಳೂರು : ಕ್ಲಿನಿಕಲ್ ಟ್ರಯಲ್ ಪೂರ್ಣಗೊಳಿಸದೇ ಕೋವಿಡ್ ಲಸಿಕೆ ನೀಡುತ್ತಿರುವುದು ಸರಿಯಲ್ಲ, ಹೀಗಾಗಿ ವಾಕ್ಸಿನ್ ನೀಡುತ್ತಿರುವುದನ್ನು ಸ್ಥಗಿತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿರುವ ಹೈಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ನೀಡುತ್ತಿರುವ ಲಸಿಕೆಯನ್ನು ಕ್ಲಿನಿಕಲ್ ಟ್ರಯಲ್ ನಲ್ಲಿ ಪರೀಕ್ಷಿಸಿಲ್ಲ. ಹೀಗಾಗಿ ಲಸಿಕೆ ಕಾರ್ಯವನ್ನು ನಿಲ್ಲಿಸಲು ನಿರ್ದೇಶಿಸಬೇಕು ಎಂದು ಕೋರಿ ನಿವೃತ್ತ ಸೇನಾಧಿಕಾರಿ ಹಾಗೂ ಇತರ ಇಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ವಿಚಾರಣೆ ನಡೆಸಿದ ಪೀಠ, ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿಲ್ಲ. ಹೀಗಾಗಿ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ. ಮುಖ್ಯವಾಗಿ ಕಳೆದ ಜನವರಿಯಿಂದಲೇ ಲಸಿಕೆ ಅಭಿಯಾನ ಆರಂಭವಾಗಿದ್ದರೂ, ಅರ್ಜಿದಾರರು ಮೇ ತಿಂಗಳಲ್ಲಿ ಬಂದು ಲಸಿಕೀಕರಣಕ್ಕೆ ತಡೆ ನೀಡಲು ಕೋರಿರುವುದು ಸರಿಯಲ್ಲ. ದೇಶದಲ್ಲಿ ಲಕ್ಷಾಂತರ ಜನ ಲಸಿಕೆಗಾಗಿ ಕಾಯುತ್ತಿರುವ ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿ ನ್ಯಾಯಾಲಯದ ಸಮಯ ವ್ಯರ್ಥಮಾಡುವ ಪ್ರಯತ್ನವೆಂದು ಅಭಿಪ್ರಾಯಪಟ್ಟು, ಅರ್ಜಿ ವಜಾ ಮಾಡಿ, ಅರ್ಜಿದಾರರಿಗೆ 50 ಸಾವಿರ ದಂಡ ವಿಧಿಸಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕೇಂದ್ರ ಸರ್ಕಾರ ಎರಡು ಲಸಿಕೆಗಳಿಗೆ ಅನುಮೋದನೆ ನೀಡಿದೆ. ಆದರೆ, ಅದಕ್ಕೆ ಯಾವುದೇ ದಾಖಲೆಗಳಿಲ್ಲ, ಅಲ್ಲದೆ ಸರ್ಕಾರ 2019ರ ಔಷಧ ನಿಯಮಾವಳಿಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ. ನಿಯಮಗಳನ್ನು ಗಾಳಿಗೆ ತೂರಿದೆ, ಹಾಗಾಗಿ ಸಾಮೂಹಿಕ ಲಸಿಕೀಕರಣವನ್ನು ತಡೆಯಬೇಕು. ಇಲ್ಲವಾದರೆ ವ್ಯಾಪಕ ಸಾಮಾಜಿಕ ಹಾನಿಯಾಗಲಿದೆ ಎಂದು ಪೀಠಕ್ಕೆ ವಿವರಿಸಿದರು.

Last Updated : May 26, 2021, 10:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.