ETV Bharat / briefs

ಸೋಂಕಿತರಿಗೆ ಹೋಳಿಗೆ ಊಟ ನೀಡಿ ಆತ್ಮಸ್ಥೈರ್ಯ ತುಂಬಿದ ಹಿರಿಯೂರು ಶಾಸಕಿ - ಚಿತ್ರದುರ್ಗ ಕೊರೊನಾ ಸುದ್ದಿ

ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಯಾವುದೇ ನೆಪಗಳನ್ನು ಹೇಳದೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿಶೇಷವಾಗಿ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿ ಪೊಲೀಸ್ ಇಲಾಖೆ ಮತ್ತು ಆಶಾ ಕಾರ್ಯಕರ್ತರು ಮಾಡುತ್ತಿರುವ ಕಾರ್ಯ ಶ್ಲಾಘನೀಯ..

Hiriyur MLA made self confidence in Covid patients

author img

By

Published : Jun 4, 2021, 10:11 PM IST

ಚಿತ್ರದುರ್ಗ : ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ನಿರಂತರವಾಗಿ ಕೋವಿಡ್ ಕೇರ್​ ಸೆಂಟರ್ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಸೋಂಕಿತರ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಇವರ ಕಾರ್ಯಕ್ಷಮತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿರಿಯೂರು ತಾಲೂಕಿನ ದೇವರುಕೊಟ್ಟ ಕೋವಿಡ್ ಕೇರ್ ಸೆಂಟರ್ ಹಾಗೂ ಮರಡಿಹಳ್ಳಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸೋಂಕಿತರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಅವರ ಕುಂದು-ಕೊರತೆಗಳ ಬಗ್ಗೆ ವಿಚಾರಿಸಿದರು. ಸೋಂಕಿತರಿಗೆ ಹೋಳಿಗೆಯ ಊಟ, ಖಾದ್ಯ ನೀಡಿ ಆತ್ಮ ಸ್ಥೈರ್ಯ ತುಂಬಿದರು.

ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಯಾವುದೇ ನೆಪಗಳನ್ನು ಹೇಳದೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿಶೇಷವಾಗಿ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿ ಪೊಲೀಸ್ ಇಲಾಖೆ ಮತ್ತು ಆಶಾ ಕಾರ್ಯಕರ್ತರು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.