ETV Bharat / briefs

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ವಲಸೆ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲು - Yadagiri district news

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿ ತಿರುಗಾಡುತ್ತಿದ್ದ ಯಾದಗಿರಿ ಜಿಲ್ಲೆಯ ನಾಲ್ವರು ವಲಸೆ ಕಾರ್ಮಿಕರ ಮೇಲೆ ಕಲಂ 188, 269, 270 ಅಡಿ ಪ್ರಕರಣ ದಾಖಲಿಸಲಾಗಿದೆ.

Home quarantine rules breaks in yadagiri district

author img

By

Published : Jun 2, 2020, 8:49 PM IST

ಯಾದಗಿರಿ: ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿ ತಿರುಗಾಡುತ್ತಿದ್ದ 4 ಜನ ವಲಸೆ ಕಾರ್ಮಿಕರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್.ಜಿ.ರಜಪೂತ್ ಮಾಹಿತಿ ನೀಡಿದರು.

ಹೊರ ರಾಜ್ಯದಿಂದ ಆಗಮಿಸುವ ವಲಸೆ ಕಾರ್ಮಿಕರು ಕಡ್ಡಾಯವಾಗಿ ಕ್ವಾರಂಟೈನ್​ನಲ್ಲಿರುವಂತೆ ಸರ್ಕಾರ ಆದೇಶ ನೀಡಿದೆ. ಆದರೆ ಜಿಲ್ಲೆಯ ವಡಗೇರಾ ತಾಲೂಕಿನ ಬೀರನಕಲ್ ತಾಂಡಾ ಮತ್ತು ಕಮಲನಾಯಕ ತಾಂಡಾದ 4 ಜನರು ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ನಿಗದಿತ ಅವಧಿ ಮುಕ್ತಾಯಗೊಂಡ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಿ ಹೋಮ್​ ಕ್ವಾರಂಟೈನ್​ ಮಾಡಲಾಗುತ್ತದೆ. ಆದರೆ, ಈ 4 ಜನರು ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಗುನ್ನೆ ನಂಬರ್ 69/2020, ಸೆಕ್ಷನ್​ 188, 269, 270 ಅಡಿಯಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಹಂತದಲ್ಲಿದೆ. ಸದ್ಯ ಇವರನ್ನು ಪುನಃ ಕ್ವಾರಂಟೈನ್ ಮಾಡಲಾಗುವುದು ಎಂದು ಹೇಳಿದರು.

ನಿಗಾದಲ್ಲಿರುವ ಜನರು, ತಮ್ಮ ಅವಲೋಕನಾ ಅವಧಿ ಮುಗಿಯುವವರೆಗೂ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ನಲ್ಲಿ ಇರತಕ್ಕದ್ದು. ಒಂದು ವೇಳೆ ನಿಯಮ ಮೀರಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಮತ್ತೆ ಕ್ವಾರಂಟೈನ್ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.