ನವದೆಹಲಿ: ಕಳೆದ ಐದು ವರ್ಷಗಳ ಕಾಲ ಮೋದಿ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಮಹತ್ವದ ಜವಾಬ್ದಾರಿ ನಿರ್ವಹಿಸಿರುವ ಅರುಣ್ ಜೇಟ್ಲಿ ಇದೀಗ ಮೋದಿ 2.0 ಸರ್ಕಾರದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಕಳೆದ 18 ತಿಂಗಳಿಂದ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಕಾರಣ, ಚುನಾವಣಾ ಕ್ಯಾಂಪೇನ್ಗಾಗಿ ನನಗೆ ನೀಡಿರುವ ಜವಾಬ್ದಾರಿ ಸಂಪೂರ್ಣವಾಗಿ ಮುಗಿಸಿರುವೆ. ಹೀಗಾಗಿ ಮುಂದಿನ ದಿನಗಳಲ್ಲಿ ನನಗೆ ಯಾವುದೇ ರೀತಿಯ ಜವಾಬ್ದಾರಿ ಬೇಡ ಎಂದು ಜೇಟ್ಲಿ ಪತ್ರ ಮುಖೇನ ಮನವಿ ಮಾಡಿಕೊಂಡಿದ್ದಾರೆ.
ಯಾವುದೇ ರೀತಿಯ ಜವಾಬ್ದಾರಿ ನೀಡದಂತೆ ಈಗಾಗಲೇ ನಾನು ಮೌಖಿಕವಾಗಿ ಮನವಿ ಮಾಡಿಕೊಂಡಿದ್ದೇನೆ. ಇದೀಗ ಆರೋಗ್ಯ ಮತ್ತು ಚಿಕಿತ್ಸೆಗೆ ನನಗೆ ಸಮಯಾವಕಾಶ ಬೇಕಾಗಿದೆ ಎಂದು ತಿಳಿಸಿದ್ದಾರೆ.
ನಾಳೆ ಸಂಜೆ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮುಂಚಿತವಾಗಿ ಜೇಟ್ಲಿ ಈ ಪತ್ರ ಬರೆದಿದ್ದಾರೆ.