ನವದೆಹಲಿ: ವೈಯಕ್ತಿಕ ಭದ್ರತಾ ಅಧಿಕಾರಿ ಮೂಲಕ ಒಂದು ದಿನ ಬಿಜೆಪಿಯವರು ನನ್ನನ್ನು ಹತ್ಯೆ ಮಾಡಲಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆತಂಕ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರು ನನ್ನ ಬದುಕಿನ ಹಿಂದೆ ಬಿದ್ದಿದ್ದಾರೆ. ಅಂಗರಕ್ಷಕರೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ ರೀತಿಯಲ್ಲಿ ನನ್ನನ್ನೂ ಕೂಡ ಬಿಜೆಪಿಯವರು ಕೊಲ್ಲಿಸುವ ಸಾಧ್ಯತೆ ಇದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪಂಜಾಬ್ನಲ್ಲಿ ಮತಬೇಟೆ ನಡೆಸುತ್ತಿದ್ದಾಗ, ಕೇಜ್ರಿವಾಲ್ ಈ ಮಾತನ್ನು ಹೇಳಿದ್ದಾರೆ.
ಇತ್ತೀಚೆಗೆ ಚುನಾವಣಾ ಪ್ರಚಾರದ ವೇಳೆ ನುಗ್ಗಿದ ವ್ಯಕ್ತಿಯೊಬ್ಬ ಕೇಜ್ರಿವಾಲ್ ಅವರಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿತ್ತು.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅರವಿಂದ ಕೇಜ್ರಿವಾಲ್ ಇವತ್ತು ಈ ಹೇಳಿಕೆ ನೀಡಿರುವ ಸಾಧ್ಯತೆ ಇದೆ.