ETV Bharat / briefs

ಅಕ್ರಮ ಮದ್ಯ ಮಾರಾಟ: ಜಿಲ್ಲಾ‌ ಕಿಸಾನ್ ಕಾಂಗ್ರೆಸ್ ಅಧ್ಯಕ್ಷನ ಬಂಧನ - ಮೈಸೂರು ಜಿಲ್ಲಾ‌ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ವಸಂತ್​ ಬಂಧನ

ಲಾಕ್​ಡೌನ್​ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಮೈಸೂರು ಜಿಲ್ಲಾ ಕಿಸಾನ್​ ಕಾಂಗ್ರೆಸ್​ ಅಧ್ಯಕ್ಷ ವಸಂತ್​ನನ್ನು ಅಬಕಾರಿ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಜಿಲ್ಲಾ‌ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ
ಜಿಲ್ಲಾ‌ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ
author img

By

Published : May 31, 2021, 3:27 PM IST

ಮೈಸೂರು: ಲಾಕ್‌ಡೌನ್ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮೈಸೂರು ಜಿಲ್ಲಾ‌ ಕಿಸಾನ್ ಕಾಂಗ್ರೆಸ್ ಅಧ್ಯಕ್ಷನನ್ನು ಅಬಕಾರಿ ಇಲಾಖೆ ಪೊಲೀಸರು ಬಂಧಿಸಿ ಕಾರು, ಮದ್ಯ ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ‌ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ಬಂಧಿತ. ಈತ ಹುಣಸೂರು ತಾಲೂಕಿನ ಕರಿಮುದ್ದನ ಹಳ್ಳಿ ಗ್ರಾಮದವನಾಗಿದ್ದು ಲಾಕ್‌ಡೌನ್ ವೇಳೆ ತನ್ನ ಕಾರಿನಲ್ಲಿ ಆಕ್ರಮ ಮದ್ಯ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾನಂತೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಇಲಾಖೆ, ಅಬಕಾರಿ ಗ್ರಾಮಾಂತರ ಎಸ್.ಪಿ. ಡಾ.ಮಹಾದೇವಿಭಾಯಿ ಮಾರ್ಗದರ್ಶನದಲ್ಲಿ ಗದ್ದಿಗೆಯ ಮುಖ್ಯ ರಸ್ತೆಯಲ್ಲಿ ನಿಂತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಅಕ್ರಮ ಮದ್ಯ ಇರುವುದು ಪತ್ತೆಯಾಗಿದ್ದು, ತಕ್ಷಣ ಕಾರು ಜಪ್ತಿ ಮಾಡಿ ವಂಸತ್​ನನ್ನು ಬಂಧಿಸಲಾಗಿದೆ. ನಂತರ ಆರೋಪಿಗೆ ಕೋವಿಡ್ ಪರೀಕ್ಷೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪಕ್ಷದಿಂದ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಾಗೂ ಸಮಾಜದಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷನನ್ನು ಅಮಾನತು ಮಾಡಿ ಕಾಂಗ್ರೆಸ್​ ಆದೇಶ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.