ಬಾಗಲಕೋಟೆ : ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಜನರಿಗಾಗಿ ಕೆಲಸ ಮಾಡಿದ್ದಾರೆ. ಅವರ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.
ನವನಗರದ ಸಹಕಾರಿ ಯೂನಿಯನ್ ಕಚೇರಿಯಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ಪ್ರೋತ್ಸಾಹ ಧನ ವಿತರಿಸಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿ ಕೆಲಸ ಮಾಡಿದ್ದಾರೆ. ಅದರಲ್ಲೂ ವೈದ್ಯರು, ನರ್ಸ್‍ಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಮಾಧ್ಯಮಗಳು, ಸರ್ಕಾರಿ ಸಿಬ್ಬಂದಿ ವಾರಿಯರ್‌ಗಳಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಇವರ ಸೇವೆಯನ್ನು ಸಮಾಜ ಗೌರವಿಸಿ, ಪ್ರೋತ್ಸಾಹಿಸಬೇಕು ಎಂದರು.
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿಡಲು ಜಿಲ್ಲಾಡಳಿತವೂ ಉತ್ತಮ ಕೆಲಸ ಮಾಡಿದೆ. ರಾಜ್ಯ ಸರ್ಕಾರ, ಆಶಾ ಕಾರ್ಯಕರ್ತೆಯರಿಗೆ ಘೋಷಿಸಿದ ಪ್ರೋತ್ಸಾಹಧನ ನೀಡಲು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ನಿರ್ದೇಶನದಂತೆ ನಮ್ಮ ಯೂನಿಯನ್‍ದಿಂದ 10 ಜನರಿಗೆ ತಲಾ ₹3 ಸಾವಿರದಂತೆ ಪ್ರೋತ್ಸಾಹ ಧನ ನೀಡಲಾಗಿದೆ ಎಂದರು.